ಫ್ಯಾಟ್ ಸರ್ಜರಿ ಮಾಡಿಸಲು ಹೋಗಿ ಕಿರುತೆರೆ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ.. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಆಕೆ ಮೃತಪಟ್ಟಿದ್ದಾಗಿ ವರದಿಯಾಗಿದೆ..
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಸಾವಿಗೀಡಾಗಿದ್ದು , ಪುತ್ರಿಯ ಸಾವಿಗೆಎ ವೈದ್ಯರೇ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ನಿವಾಸವಿದೆ.
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.
ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ಆಡ್ಮಿಟ್ ಆಗಿದ್ದರು. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಗಂಭೀರವಾಗಿ ಶಂಕರಮಠದ ಕಾಡೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ದೊರೆಸಾನಿ , ಗೀತಾ, ಒಲವಿನ ನಿಲ್ದಾಣ ದಾರಾವಾಹಿಗಳಲ್ಲಿ ಚೇತನಾ ರಾಜ್ ನಟಿಸುತ್ತಿದ್ದರು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವೈದ್ಯರ ನಿರ್ಲಕ್ಷ್ಯದಿಂದ ಚೇತನಾ ರಾಜ್ ಮೃತಪಟ್ಟಿದ್ದಾಳೆ. ಯಾವುದೇ ಪೋಷಕರ ಅನುಮತಿ ಇಲ್ಲದೇ ಹೇಗೆ ಸರ್ಜರಿ ಮಾಡಿದರು. ಆಸ್ಪತ್ರೆಯವರೇ ಚೇತನಾ ರಾಜ್ ಸಾವಿಗೆ ಕಾರಣ. ಚೇತನಾ ರಾಜ್ ದೊಡ್ಡಪ್ಪ ರಾಜಣ್ಣ ಆರೋಪಿಸಿದ್ದಾರೆ.