ಕೇರಳ : ನಟಿ ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದಿಲೀಪ್ ಕೊಲೆ ಸಂಚು ಆರೋಪ ಎದುರಿಸುತ್ತಿದ್ದಾರೆ..
ನಟಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಬೆದರಿಕೆಯೊಡ್ಡಿದ ಆರೋಪದ ಮೇಲೆ, ಜನವರಿಯಲ್ಲಿ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಿಸಲಾಗಿತ್ತು. ಆ ಬಳಿಕ ಮತ್ತೆ ನಟ ದಿಲೀಪ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲೀಪ್ ಸ್ನೇಹಿತ ಶರತ್ ಜಿ ನಾಯರ್ ರನ್ನ ಪೊಲೀಸರು ಬಂಧಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದಡಿ ಪೊಲೀಸರು ಶರತ್ ಜಿ ನಾಯರ್ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ನಟ ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ಶರತ್ ಜಿ ನಾಯರ್ ಭೇಟಿ ನೀಡಿದ್ದಾರೆ ಎಂಬ ಸಿನಿಮಾ ನಿರ್ದೇಶಕ ಬಾಲಚಂದ್ರಕುಮಾರ್ ಹೇಳಿಕೆ ಆಧಾರದ ಮೇಲೆ ಪೊಲೀಸರು ಶರತ್ ರನ್ನ ಬಂಧಿಸಿದ್ದಾರೆ.
ಕೇರಳದ ಖ್ಯಾತ ಬಹುಭಾಷಾ ನಟಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ (2017) ದಲ್ಲಿ ಅನೇಕರ ಹೆಸರುಗಳಿದ್ದು , ನಟ ದಿಲೀಪ್ ಕುಮಾರ್ ಸಹ ಪ್ರಮುಖ ಆರೋಪಿಯಾಗಿದ್ದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು..
ತಮಿಳು, ತೆಲುಗು, ಮಲಯಾಳಂ, ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಖ್ಯಾತಿ ನಟಿಯನ್ನು 2017ರ ಫೆಬ್ರವರಿ 17ರಂದು ರಾತ್ರಿ ವಾಹನದಲ್ಲಿ ಅಪಹರಿಸಿ ಸುಮಾರು ಎರಡು ಗಂಟೆಗಳ ಕಾಲ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಪ್ರಕರಣದಲ್ಲಿ 10 ಮಂದಿ ಹೆಸರಿದ್ದು , 7 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿ ದಿಲೀಪ್ ರನ್ನು ಬಂಧಿಸಿ ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸಲಾಗಿದೆ.