ಕಳೆದ ವರ್ಷ ಡಿಸೆಂಬರ್ 17 ರಂದು ಬಿಡುಗಡೆಯಾದ ಪುಷ್ಪ ( Pushpa ) ಸಿನಿಮಾಗೆ ಆರಂಭದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ, ದಿನ ಕಳೆದಂತೆ ಪುಷ್ಪ ಮೇನಿಯಾ ಜೋರಾಯ್ತು. ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿ 400 ಕೋಟಿ ಕಲೆಕ್ಷನ್ ಕ್ಲಬ್ ಗೆ ಸೇರಿತು.
ಮುಖ್ಯವಾಗಿ ಬಾಲಿವುಡ್ ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬಿ ಟೌನ್ ನಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಸಿನಿಮಾದ ಸೀಕ್ವೆಲ್ ಪುಷ್ಪ 2 ಶೂಟಿಂಗ್ ನಲ್ಲಿ ತಂಡ ಬ್ಯುಸಿಯಾಗಿದೆ.. ಈ ನಡುವೆ ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಇದೀಗ ‘ಪುಷ್ಪ 2’ ಸಿನಿಮಾಗೆ ಬೇಡಿಕೆ ಹೆಚ್ಚಿದೆ. ಅಷ್ಟೇ ಅಲ್ಲ KGF 2 ಹವಾ…!!! ಎಲ್ರಿಗೂ ಗೊತ್ತಿದೆ..ಬಾಕ್ಸ್ ಆಫೀಸ್ ನಲ್ಲಿ ಯಾವ್ ರೇಂಜ್ ಗೆ ತೂಫಾನ್ ಎಬ್ಬಿಸಿದೆ ಅನ್ನೋದು ಎಲ್ರಿಗೂ ಗೊತ್ತೇ ಇದೆ..
ಇದೀಗ KGF 2 ರೇಂಜ್ ಗೆ ಸದ್ದು ಮಾಡಬೇಕು , ಅದರ ರೆಕಾರ್ಡ್ ಮುರಿಯಲು ಪುಷ್ಪ 2 ಅದ್ಧೂರಿಯಾಗಿ ತಯಾರಾಗಬೇಕಿದೆ.. ಹೀಗಾಗಿ ವದಂತರಿಗಳ ಪ್ರಕಾರ ಪುಷ್ಪ 2 ಸಸಿನಿಮಾ ಭಾರೀ ಬಜೆಟ್ ನಲ್ಲಿ ತಯಾರಾಗ್ತಿದೆ ಎನ್ನಲಾಗ್ತಿದೆ.. ಹೌದು ಈ ಸಿನಿಮಾ ಸುಮಾರು 400 ಕೋಟಿ ರೂ ಬಜೆಟ್ ನಲ್ಲಿ ತಯಾರಾಗಲಿದೆ ಎನ್ನಲಾಗ್ತಿದೆ..
ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ಬಾಕ್ಸಾಫೀಸ್‌ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿಕೊಂಡಿತ್ತು. ಪುಷ್ಪ 194 ಕೋಟಿ ಬಜೆಟ್ ನಲ್ಲಿ ಮೂಡಿ ಬಂದಿತ್ತು.. ಇದೀಗ ಪುಷ್ಪ 2 ಗೆ 400 ಕೋಟಿ ಬಜೆಟ್ ಹಾಕಲಾಗುತ್ತದೆ ಎಂದು ಹೇಳಲಾಗುತ್ತಿದೆ.