The kashmir Files
The Kashmir Files ಸಿನಿಮಾ ಇತ್ತೀಚೆಗೆ ದೇಶಾದ್ಯಂತ ಸಂಚಲನವನ್ನೇ ಸೃಷ್ಟಿಸಿದ ಸಿನಿಮಾ ಅಂದ್ರೂ ತಪ್ಪಾಗೋದಿಲ್ಲ.. ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.. ದಿ ಕಾಶ್ಮೀರ್ ಫೈಲ್ಸ್ 300 ಕೋಟಿ ರೂ ಗಡಿ ದಾಟಿದೆ..
ಈ ಸಿನಿಮಾಗೆ ಹಾಗೂ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.. ಸಿನಿಮಾಗೆ ಪರ ಅಷ್ಟೇ ಅಲ್ದೇ ವಿರೋಧಿ ಅಲೆಯೂ ಎದ್ದಿದ್ದು , ರಾಜಕೀಯವಾಗಿ ಚರ್ಚಾ ವಿಚಾರವೂ ಆಗಿತ್ತು..
ಮಾರ್ಚ್ 11 ರಂದು ಬಿಡುಗಡೆಯಾದ ಈ ಸಿನಿಮಾಗೆ ದೇಶಾದ್ಯಂತ ಥಿಯೇಟರ್ ಗಳಲ್ಲಿ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.
ಈ ಸಿಸಿನಿಮಾದ ನಿರ್ದೇಶಕರಾದ ವಿವೇಕ್ ಅಗ್ನಿಹೋತ್ರಿ ಅವರು ಇದೀಗ ದೆಹಲಿ ಫೈಲ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ..
ಈ ನಡುವೆ ಅವರಿಗೆ ಅವಮಾನವೊಂದು ಆಗಿದೆ.. ನಿನ್ನೆ ಇಂಗ್ಲೆಂಡಿನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಭಾಷಣ ಮಾಡಬೇಕಿತ್ತು.
ಅದಕ್ಕಾಗಿ ವಿಶ್ವವಿದ್ಯಾಲಯವು ಅವರನ್ನು ಆಹ್ವಾನಿಸಿತ್ತು. ಆದರೆ ಕೊನೆ ಕ್ಷಣದಲ್ಲಿ ಅಗ್ನಿಹೋತ್ರಿ ಭಾಷಣವನ್ನು ರದ್ದು ಮಾಡುವ ಮೂಲಕ ಅವಮಾನಿಸಲಾಗಿದೆ ಎಂದು ವಿವೇಕ್ ಅವರು ಹೇಳಿಕೊಂಡಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ವಿವೇಕ್ ಅಗ್ನಿಹೋತ್ರಿ, ಹಿಂದೂ ಧ್ವನಿಯನ್ನು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಹತ್ತಿಕ್ಕುವಂತಹ ಕೆಲಸವಾಗಿದೆ. ಅವರು ಕೊನೆ ಕ್ಷಣದಲ್ಲಿ ನನ್ನ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಈ ಮೂಲಕ ಅವರು ಅಲ್ಪಸಂಖ್ಯಾತರಾಗಿರುವ ಹಿಂದೂ ಜನಾಂಗೀಯ ಹತ್ಯೆ ಮತ್ತು ಹಿಂದೂ ವಿದ್ಯಾರ್ಥಿಗಳ ಹಕ್ಕುಗಳನ್ನು ಮೊಟಕುಗೊಳಿಸಿದ್ದಾರೆ. ನನ್ನ ಭಾಷಣ ರದ್ದಾಗುವುದಕ್ಕೆ ಕಾರಣ, ಅಲ್ಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದವರು ಪಾಕಿಸ್ತಾನಿ ಮೂಲದವರು. ಈ ಕಷ್ಟದ ಹೋರಾಟದಲ್ಲಿ ನೀವು ನನ್ನನ್ನು ಬೆಂಬಲಿಸಿ ಎಂದು ಬರೆದುಕೊಂಡಿದ್ದಾರೆ..
ಅಂದ್ಹಾಗೆ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಒಟಿಟಿಯಲ್ಲೂ ಸಿನಿಮಾದ್ದೇ ಅಬ್ಬರವಾಗಿದೆ.. ಮೇ 13 ರಂದು ಒಟಿಟಿಯಲ್ಲಿ ರಿಲೀಸ್ ಆಗಿ ಅಲ್ಲಿಯೂ ಕೂಡ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ.
ಜೀ5 ನಲ್ಲಿ ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರೀ ವೀಕ್ಷಣೆ ಪಡೆದುಕೊಂಡಿದೆ. ಕೇವಲ ಒಂದು ವಾರದಲ್ಲಿಯೇ 20 ಲಕ್ಷಕ್ಕೂ ಅಧಿಕ ಜನ ಜೀ5ನಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ.