ಅಕ್ಷಯ್ ನಟನೆಯ ಪೃಥ್ವಿರಾಜ್ ಸಿನಿಮಾಗೆ ತೆರಿಗೆ ವಿನಾಯ್ತಿ ಘೋಷಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್..!!
ಅಕ್ಷಯ್ ಕುಮಾರ್ , ಮಾನುಷಿ ಚಿಲ್ಲರ್ ನಟಿಸಿರುವ ಐತಿಹಾಸಿಕ ಸಿನಿಮಾ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾಗೆ ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲೇ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರವು ತೆರಿಗೆ ವಿನಾಯ್ತಿ ಘೋಷಿಸಿದೆ..
ನಾಳೆ ವಿಶ್ವದಾದ್ಯಂತ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ರಿಲೀಸ್ ಆಗುತ್ತಿದೆ. ಒಂದು ಕಡೆ ಮುಸ್ಲಿಂ ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ಪ್ರದರ್ಶನ ಮಾಡದಂತೆ ನಿಷೇಧ ಹೇರಲಾಗಿದೆ. ಭಾರತದಲ್ಲಿ ಈ ಸಿನಿಮಾಗೆ ಕೆಲ ಕಡೆ ತೆರಿಗೆ ವಿನಾಯತಿ ಘೋಷಿಸಲಾಗುತ್ತಿದೆ.
ನಿನ್ನೆಯಷ್ಟೇ ಗಣ್ಯರಿಗಾಗಿ ಈ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜನೆ ಮಾಡಲಾಗಿತ್ತು.. ಈ ಸಿನಿಮಾವನ್ನ ಅಮಿತ್ ಶಾ ಅವರು ವೀಕ್ಷಿಸಿ ಕೊಂಡಾಡಿದ್ದರು.. ಇದೇ ವಿಶೇಷ ಪ್ರದರ್ಶನಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ಸಿನಿಮಾ ವೀಕ್ಷಿಸಿದ ನಂತರ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದಾರೆ.
ಇದೊಂದು ಐತಿಹಾಸಿಕ ಸಿನಿಮಾವಾಗಿದ್ದು, ಎಲ್ಲರೂ ನೋಡಬೇಕಿದೆ. ಹಾಗಾಗಿ ಉತ್ತರ ಪ್ರದೇಶದಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ..