ಖ್ಯಾತ ಚಿತ್ರಸಾಹಿತಿ, ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ವಿಧಿವಶರಾಗಿದ್ದಾರೆ.. ಇವರು ಚಿತ್ರ ಸಾಹಿತಿಗಳಾಗಿದ್ದರು.. ನಿನ್ನೆ ಅಮೇರಿಕಾದ ತಮ್ಮ ಮಗಳ ನಿವಾಸದಲ್ಲಿ ಇವರು ಕೊನೆಯುಸಿರೆಳೆದಿದ್ದಾರೆ. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು.
ಇವರು ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಮಗನಾಗಿದ್ಧಾರೆ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ. ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತರಚನೆ ಮಾಡಿದ್ದಾರೆ. ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್ ನ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯ ನಿರ್ವಹಿಸಿದ್ದರು.