ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ದಶಕಗಳ ಕಾಲ ಸಿನಿಮಾರಂಗದಲ್ಲಿ ಮೆರೆದು ನಂತರ ಕೆಲ ವರ್ಷಗಳಿಂದ ಸಿನಿಮಾರಂಗ ಜೊತೆಗೆ ರಾಜಕೀಯದಿಂದಲೂ ದೂರ ಉಳಿದಿದ್ದಾರೆ.. ಆದ್ರೆ ಎವರ್ ಗ್ರೀನ್ ನಟಿ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾಗೆ ಈಗಲೂ ಫ್ಯಾನ್ ಫಾಲೋವರ್ ಗಳೇನು ಕಡಿಮೆಯಿಲ್ಲ.. ಈಗಲೂ ಅವರು ಸಿನಿಮಾ ರಂಗಕ್ಕೆ ಮರಳಬೇಕೆಂದು ಅಭಿಮಾನಿಗಳು ಕಾಯ್ತಿದ್ದಾರೆ..
ರಮ್ಯಾ ಸಿನಿಮಾ ರಾಜಕೀಯದಿಂದ ದೂರವೇ ಉಳಿದರೂ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಸಖತ್ ಆಕ್ಟೀವ್ ಆಗಿದ್ದಾರೆ..
ಇದೀಗ ರಮ್ಯಾ ನೆಟ್ಟಿಗನೊಬ್ಬನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ಧಾರೆ.. ಕಿಡಿಗೇಡಿಯೊಬ್ಬ ಇನ್ಸ್ಟಾದಲ್ಲಿ ರಮ್ಯಾ ಅವರಿಗೆ ನಿಂದನೆ ಮಾಡಿದ್ದಾನೆ ಎಂದು ರಮ್ಯಾ ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿ ಇರುವ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ..
ತಮಗೆ ಇನ್ಸ್ಟಾಗ್ರಾಮ್‌ನಲ್ಲಿ ವ್ಯಕ್ತಿಯೊಬ್ಬ ನಿಂದನೆ ಮಾಡಿದ್ದು, ಅವನ ವಿರುದ್ಧ ಸೂಕ್ತ ಕ್ರಮ ತಗೆದುಕೊಳ್ಳುವಂತೆ ರಮ್ಯಾ ಮನವಿ ಮಾಡಿದ್ದಾರೆ.