ಸೌತ್ ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಸೆಂಚುರಿ ಸ್ಟಾರ್ ಶಿವಣ್ಣ ಸಿನಿಮಾ ಮಾಡ್ತಿದ್ದಾರೆ ಅನ್ನೋ ವಿಚಾರ ಹಲವು ದಿನಗಳಿಂದ ಭಾರೀ ಸದ್ದು ಮಾಡ್ತಿತ್ತು..
ಇದೀಗ ರಜನಿ 169ನೇ ಚಿತ್ರದಲ್ಲಿ ಶಿವಣ್ಣ ರಜನಿಕಾಂತ್ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ ಎಂಬ ಸುದ್ದಿ ವೈರಲ್ ಆಗ್ತಿದೆ..
ಅಂದ್ಹಾಗೆ ಇದೇ ಮೊದಲ ಬಾರಿಗೆ ಶಿವರಾಜ್ಕುಮಾರ್ ಅವರು ತಮಿಳು ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.
ಅಂದ್ಹಾಗೆ ನಟ ರಜನಿಕಾಂತ್ ಜೊತೆಗೆ ಶಿವರಾಜ್ ಕುಮಾರ್ ಅಭಿನಯಿಸುತ್ತಾರೆ ಎನ್ನುವ ಸುದ್ದಿ ಈಗ ಖಚಿತವಾಗಿದೆ. ನಟ ಶಿವರಾಜ್ ಕುಮಾರ್ ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಜನಿಕಾಂತ್ ಮತ್ತು ನಾನು ಒಟ್ಟಿಗೆ ತೆರೆಮೇಲೆ ಬರುವುದನ್ನು ನೋಡಲು ಅಭಿಮಾನಿಗಳು ಇಷ್ಟ ಪಡುತ್ತಾರೆ ಎಂದಿದ್ದಾರೆ. ಈ ಮೂಲಕ ರಜನಿಕಾಂತ್ ಜೊತೆಗೆ ತಮಿಳು ಚಿತ್ರದಲ್ಲಿ ಅಭಿನಯಿಸುವ ವಿಚಾರವನ್ನು ಖಚಿತ ಪಡಿಸಿದ್ದಾರೆ..