ಬೆಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿಗಳ ಮೇಲೆ ಬೆಂಗಳೂರು ಪೊಲೀಸರು ದಾಳಿ ನಡೆಸಿದ್ದು, ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಮತ್ತು ನಟ ಸಿದ್ಧಾಂತ್ ಕಪೂರ್ ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಸೇರಿದಂತೆ 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಿದ್ದಾರೆ.
ಮುಂಬೈ ಮೂಲದ ಡಿಜೆಯಿಂದ ಡ್ರಗ್ಸ್ ಸಪ್ಲೈ ಶಂಕೆ ವ್ಯಕ್ತವಾಗಿದೆ. ಅಖೀಲ್ ಸೋನಿ, ಅಜೋದ್ ಸಿಂಗ್ ಪಂಜಾಬ್, ಅಖೀಲ್, ಅನಿ, ದರ್ಶನ್ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳೇಲ್ಲರು ಟೆಕ್ಕಿಗಳಾಗಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ ಕೊಟ್ಟಿದ್ದಾರೆ.