ಸೌತ್ ಸಿನಿಮಾ ಇಂಡಡಸ್ಟ್ರಿಯಲ್ಲಿ ಲೇಡಿ ಪವರ್ ಸ್ಟಾರ್ , ಸಹಜ ಸುಂದರಿ , ರೌಡಿ ಬೇಬಿ ಸಾಯಿ ಪಲ್ಲವಿಗೆ ದೊಡ್ಡ ಫ್ಯಾಂಡಮ್ ಇದೆ… ಸಾಯಿ ಪಲ್ಲವಿಗೆ ಎಷ್ಟು ದೊಡ್ಡ ಅಭಿಮಾನಿಗಳ ಬಳಗವಿದೆ ಅನ್ನೋದಕ್ಕೆ ಒಂದು ಸಣ್ಣ ಝಳಕ್ ಇತ್ತೀಚೆಗೆ ರಷ್ಮಿಕಾ ಮಂದಣ್ಣ ಸಿನಿಮಾ ಆಡವಾಳ್ಳು ಮೀಕು ಜೋಹಾರ್ಲು ಕಾರ್ಯಕ್ರಮದಲ್ಲೇ ಸಿಕ್ಕಿತ್ತು.. ಅಲ್ಲದೇ ಇಂಡಸ್ಟ್ರಿಗೆ ಸಾಯಿ ಪಲ್ಲವಿ ಯಾಕೆ ಲೇಡಿ ಪವರ್ ಸ್ಟಾರ್ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿತ್ತು.. ಕಾರ್ಯಕ್ರಮ ರಶ್ಮಿಕಾ ಸಿನಿಮಾದೇ ಆದ್ರೂ ಅಲ್ಲಿದ್ದವರೆಲ್ಲಾ ನಾನ್ ಸ್ಟಾಪ್ ಚಪ್ಪಾಳೆ ಸಿಡಿಸಿದ್ದು ಸಾಯಿ ಪಲ್ಲವಿಗೆ..
ಪ್ರೇಮಂ ಸಿನಿಮಾ ಮೂಲಕ ಇಂಡಸ್ಟ್ರತಿಗೆ ಪಾದಾರ್ಪಣೆ ಮಾಡಿದ ಡ್ಯಾನ್ಸಿಂಗ್ ಕ್ವೀನ್ , ತಮ್ಮ ನ್ಯಾಚುರಲ್ ಅದಾ ಮೂಲಕ ಅಭಿಮಾನಿಗಳನ್ನ ‘ಫಿದಾ’ ಆಗುವಂತೆ ಮಾಡಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ..
ಗಾರ್ಗಿ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಪವರ್ ಸ್ಟಾರ್ ಸಾಯಿ ಪಲ್ಲವಿ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡ್ತಿದ್ದು , ಕನ್ನಡ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ..
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಸಾಯಿ ಪಲ್ಲವಿ, ನಾನು ಎಡ ಮತ್ತು ಬಲ ಅಂತ ಕೇಳಿದ್ದೇನೆ. ಆದರೆ ಎರಡರ ಬಗ್ಗೆಯೂ ನನಗೆ ಆಳವಾದ ಜ್ಞಾನವಿಲ್ಲ. ಆದರೆ ನಾನು ಮನುಷ್ಯತ್ವದ ಪರ ಮಾತನಾಡುತ್ತೇನೆ.
ನನ್ನ ಮನೆಯಲ್ಲಿ ಕಲಿಸಿದ್ದು ನ್ಯೂಟ್ರಲ್ ನಿಯಮ. ಹಾಗಾಗಿ ಕಾಶ್ಮೀರದಲ್ಲಿ ಪಂಡಿತರ ಹತ್ಯೆಯನ್ನು ಹೇಗೆ ಧಾರ್ಮಿಕ ದೃಷ್ಟಿಕೋನದಿಂದ ನೋಡಲಾಯಿತೋ, ಹಾಗೆಯೇ ಲಾಕ್ಡೌನ್ ಸಮಯದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಟೆಂಪೋ ಡ್ರೈವರ್ ಮೇಲೆ ಜೈ ಶ್ರೀರಾಮ್ ಎಂದು ಹೇಳುತ್ತಾ ಕೊಚ್ಚಿಕೊಂದ ಘಟನೆಯನ್ನೂ ನಾನು ಹಾಗೆಯೇ ನೋಡಬೇಕಾಗುತ್ತದೆ. ಎರಡು ಹತ್ಯೆಯೂ ಒಂದೇ ಎಂದು ಹೇಳಿದ್ದಾರೆ.
ಇತ್ತೀಚೆಗೆ ಅವರು ನೀಡಿರೋ ಹೇಳಿಕೆಗಳಿಗೆ ಸಾಕಷ್ಟು ಪರ ವಿರೋಧ ಚರ್ಚೆಗಳು ಬರುತ್ತಿವೆ..
ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಯಾತಕ್ಕಾಗಿ.. ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಅಭಿಪ್ರಾಯ ಪಟ್ಟಿದ್ದು , ಅವರ ಈ ಹೇಳಿಕೆ ಸಾಕಷ್ಟು ವೈರಲ್ ಆಗ್ತಿದೆ..