ನಾಗಚೈತನ್ಯ ಜೊತೆಗೆ ತಮ್ಮ ನಾಲ್ಕು ವರ್ಷದ ದಾಂಪತ್ಯಕ್ಕೆ ಇತಿಶ್ರೀ ಹಾಡಿದ ಟಾಲಿವುಡ್ ನ ಕ್ಯೂಟ್ ಬ್ಯೂಟಿ ಸಮಂತಾ ,, ಬೋಲ್ಡ್ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.. ಗ್ಲಾಮರಸ್ ಆಗೂ ಅಭಿಮಾನಿಗಳ ಹಾರ್ಟ್ ಗೆ ಬೆಂಕಿ ಇಡ್ತಾರೆ.. ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಿರುವ ಸ್ಯಾಮ್ ಸೋಷಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆಕ್ಟೀವ್..
10 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಟಾಲಿವುಡ್ ನ ಸ್ಟಾರ್ ಕಪಲ್ ಸಮಂತಾ ನಾಗಚೈತನ್ಯ ಕೆಲ ತಿಂಗಳುಗಳ ಹಿಂದಷ್ಟೇ ಡಿವೋರ್ಸ್ ಪಡೆದಿದ್ದು ತಮ್ಮ ನಾಲ್ಕು ವರ್ಷಗಳ ದಾಂಪತ್ಯಕ್ಕೆ ಇತಿಶ್ರೀ ಹಾಡಿದ್ದಾರೆ..
ಇವರ ಡಿವೋರ್ಸ್ ಸುದ್ದಿಯಿಂದ ಅಭಿಮಾನಿಗಳು ಸಿಕ್ಕಾಪಟ್ಟೆ ಶಾಕ್ ಆಗಿದ್ದರು.. ಇವರಿಬ್ಬರೂ ಸಹ ಈ ವಿಚಾರವಾಗಿ ಮೌನವಾಗಿದ್ರೂ ನೆಟ್ಟಿಗರು ಸೈಲೆಂಟ್ ಇರಲ್ಲ.. ಈವರೆಗೂ ಇಬ್ಬರ ಅಭಿಮಾನಿಗಳೂ ಪರಸ್ಪರರನ್ನ ಟ್ರೋಲ್ ಮಾಡ್ತಾ ಬಂದಿದ್ದಾರೆ.. ಇಬ್ಬರೂ ಸದ್ಯ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ..
ಸಮಂತಾ ಬಾಲಿವುಡ್ , ಹಾಲಿವುಡ್ ಗೂ ಪಾದಾರ್ಪಣೆ ಮಾಡ್ತಾ ಇದ್ದಾರೆ.. ಸದ್ಯ ಪ್ಯಾನ್ ಇಂಡಿಯಾ ಸಿನಿಮಾ ಯಶೋಧಾ , ಹಾಗೂ ವಿಜಯ್ ದೇವರಕೊಂಡ ಜೊತೆಗೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಖುಷಿಯಲ್ಲಿ ಸಮಂತಾ ಬ್ಯುಸಿಯಾಗಿದ್ದಾರೆ..
ಪುಷ್ಪದಲ್ಲಿ ಸಮಂತಾ ಮೊದಲ ಬಾರಿಗೆ ಐಟಮ್ ಹಾಡಿಗೆ ಹೆಜ್ಜೆ ಹಾಕಿದ್ದರು.. ಸಖತ್ ಗ್ಲಾಮರಸ್ ಆಗಿಯೂ ಕಾಣಿಸಿಕೊಂಡಿದ್ದರು.. ಈ ಡ್ಯಾನ್ಸ್ ಸಿನಿಮಾದ ಹೈಲೇಟ್ ಆಗಿತ್ತು..
ಊ ಅಂಟಾವಾ ಮಾವ ಊಹು ಅಂತಾವಾ ಮಾವ ಸೌತ್ ನಲ್ಲಿ ಹಿಟ್ ಆಯ್ತು.. ಬಾಲಿವುಡ್ ನಲ್ಲಿ ಸೂಪರ್ ಡೂಪರ್ ಹಿಟ್ ಆಯ್ತು.. ಈಗಲೂ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗ್ತಿರುತ್ತೆ.. ಇದೀಗ ಬಾಲಿವುಡ್ ನ ಸಿನಿಮಾದಲ್ಲಿ ಐಟಂ ಹಾಡಿಗೆ ಡ್ಯಾನ್ಸ್ ಮಾಡುವುದಕ್ಕೆ ಸಮಂತಾಗೆ ಆಫರ್ ಸಿಕ್ಕಿದ್ಯಂತೆ.. ಅದು ಕೂಡ ನಟ ರಣಬೀರ್ ಕಪೂರ್ ಹಾಗು ರಶ್ಮಿಕಾ ನಟನೆಯ ಅನಿಮಲ್ ಸಿನಿಮಾದಲ್ಲಿ ಸೊಂಟ ಬಳುಕಿಸಲು ಆಫರ್ ಸಿಕ್ಕಿದ್ದು , ಸಮಂತಾ ಇನ್ನೂವರೆಗೂ ಗ್ರೀನ್ ಸಿಗ್ನಲ್ ನೀಡಿಲ್ಲ ಎನ್ನಲಾಗಿದೆ.. ಮುಂದಿನ ದಿನಗಳಲ್ಲಿ ಈ ಆಫರ್ ಒಪ್ಪಿಕೊಳ್ತಾರಾ ಇಲ್ವಾ ಕಾದುನೋಡಬೇಕಿದೆ..