Jaggesh
ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್
ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರು ನಟ ಜಗ್ಗೇಶ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನಸೆಳೆದಿದ್ದಾರೆ. ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು ಈ ವೇಳೆ ನಟ ಜಗ್ಗೇಶ್ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಇವರೊಂದಿಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ಸಿಂಗ್ ಹಾಗೂ ಜೈರಾಮ್ ರಮೇಶ್ ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೆಹಲಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನಟ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ದೆಹಲಿಯಲ್ಲಿರುವ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ ನೀಡಿ ಬೃಂದಾವನ ದರ್ಶನ ಮಾಡಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ, ಪ್ರಮಾಣವಚನ ಸಿರಿಗನ್ನಡದಲ್ಲಿ, ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ…ಹೃದಯಪೂರ್ವಕ ಧನ್ಯವಾದಗಳು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.