ಟಾಲಿವುಡ್ ನಲ್ಲಿ ಬಹುಬೇಡಿಕೆಯ ನಟಿಯಾಗಿ ಮೆರೆಯುತ್ತಿರುವ ರಶ್ಮಿಕಾಗೆ ಟಾಲಿವುಡ್ ನಲ್ಲೂ ಬೇಡಿಕೆ ಕಮ್ಮಿಯಿಲ್ಲ.. ಕನ್ನಡದಿಂದ ಔಟ್ ಡೇಟೆಡ್ ಆಗಿದ್ದರೂ ಬಾಲಿವುಡ್ ನಲ್ಲಿಯೂ ಮಿಂಚುತ್ತಿದ್ದಾರೆ..
ಬಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ಮಾಡ್ತಿದ್ಧಾರೆ.. ಕನ್ನಡ ಸಿನಿಮಾರಂಗದಿಂದ ಹಿಟ್ ಆದವರು.. ಸದ್ಯ ಕನ್ನಡ ಸಿನಿಮಾರಂಗದಿಂದ ದೂರವಿದ್ದಾರೆ..
ಅಂದ್ಹಾಗೆ ತಮಿಳಿನಲ್ಲಿ ವಿಜಯ್ ಅವರ 66 ನೇ ಸಿನಿಮಾದಲ್ಲಿ ರಶ್ಮಿಕಾ ನಾಯಕಿ ಅನ್ನೋದು ಎಲ್ರಿಗೂ ಗೊತ್ತಿದೆ..
ನಟಿ ರಷ್ಮಿಕಾ ಮಂದಣ್ಣ ಪ್ರಸ್ತುತ ಸಾಲು ಸಾಲು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ.
ತೆಲುಗು, ತಮಿಳು ಸಿನಿಮಾಗಳಲ್ಲಿ ಅಲ್ಲದೇ ಹಿಂದಿಯಲ್ಲೂ ಕೂಡ ಸಿನಿಮಾಗಳನ್ನು ಮಾಡುತ್ತಿದ್ದಾರೆ.
ಇಲ್ಲಿಯವರಗೆ ಆಕೆ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಸಿನಿಮಾದಲ್ಲಿ ನಟಿಸಿದ್ದು, ಮಿಷನ್ ಮಜ್ನು ರಿಲೀಸ್ ಗೆ ಸಿದ್ಧವಾಗಿದೆ.
ಶೀಘ್ರದಲ್ಲಿಯೇ ಮತ್ತೊಂದು ಸಿನಿಮಾ ಗುಡ್ ಬೈ ಪ್ರೇಕ್ಷಕರ ಮುಂದೆ ಬರಲಿದೆ.
ಇದರ ನಡುವೆ ರಣಬೀರ್ ಕಪೂರ್ ಜೊತೆಗೆ ಅನಿಮಲ್ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ.. ಇದು ಬಾಲಿವುಡ್ ನಲ್ಲಿ ಅವರ ಮೂರನೇ ಸಿನಿಮಾವಾಗಿದೆ..
ಆದ್ರೆ ಇದೀಗ ಮೂರೂ ಸಿನಿಮಾಗಳೂ ರಿಲೀಸ್ ಗೂ ಮೊದಲೇ ಹಿಂದಿಯ ನಾಲ್ಕನೇ ಸಿನಿಮಾದಲ್ಲಿ ರಶ್ಮಿಕಾ ನಟಿಸೋದಕ್ಕೆ ರೆಡಿಯಾಗಿದ್ದಾರೆಂದು ಹೇಳಲಾಗ್ತಿದೆ..
ಅದು ಕೂಡ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರ ಸಿನಿಮಾದಲ್ಲಿ ಸ್ಟಾರ್ ನಟನ ಜೊತೆಗೆ ಬಣ್ಣ ಹಚ್ಚಲಿದ್ದಾರಂತೆ ರಶ್ಮಿಕಾ..
ಹೌದು..! ಅಂದ್ಹಾಗೆ ರಶ್ಮಿಕಾ ಟೈಗರ್ ಶ್ರಾಫ್ ಗೆ ನಾಯಕಿಯಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ..
ಧರ್ಮ ಪ್ರೋಡಕ್ಷನ್ಸ್ ಅಡಿಯಲ್ಲಿ ಕರಣ್ ಜೋಹರ್ ಈ ಸಿನಿಮಾಗೆ ಬಂಡವಾಳ ಹೂಡುತ್ತಾರಂತೆ..