ಅಭಿನಯ ಬ್ರಹ್ಮ , ಹಿರಿಯ ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ಸಿಕ್ಕಿದೆ… ಬೆಂ ಉತ್ತರ ವಿವಿಯಿಂದ ಗೌರವ ಡಾಕ್ಟರೇಟ್
ಅನಂತ್ ನಾಗ್ ಸೇರಿ ಮೂವರಿಗೆ ಡಾಕ್ಟರೇಟ್ ಸಿಕ್ಕಿದೆ..
ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ಅನಂತ್ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.
ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ಸಾಧನೆಗಾಗಿ ಅನಂತ್ ನಾಗ್ ಅವರಿಗೆ, ಸಂಗೀತ ಕ್ಷೇತ್ರದಲ್ಲಿ ಎಸ್. ಬಲ್ಲೇಶ್ , ಭಜಂತ್ರಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಾಧನೆಗಾಗಿ ಶರತ್ ಶರ್ಮಾಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.