ಇತ್ತೀಚೆಗಷ್ಟೇ ಅವಳಿ ಗಂಡುಮಕ್ಕಳಿಗೆ ಜನ್ಮ ನೀಡಿರುವ ಸ್ಯಾಂಡಲ್ ವುಡ್ ನಟಿ ಅಮೂಲ್ಯ ಅವರು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ.. ಅಂದ್ಹಾಗೆ ಇದೇ ಮೊದಲ ಬಾರಿಗೆ ಅಮೂಲ್ಯ ತಮ್ಮ ಮೊಟ್ಟ ಮೊದಲ ರೀಲ್ ಮಾಡಿದ್ದು , ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ..
ಅಮೂಲ್ಯ ಲಂಗ ದಾವಣಿ ತೊಟ್ಟು ಮುದ್ದು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.. ಶರಣ್ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ಗುರು ಶಿಷ್ಯರು ಚಿತ್ರದ ಆಣೆ ಮಾಡಿ ಹೇಳುತೀನಿ ಹಾಡಿಗೆ ಸ್ಟೆಪ್ ಹಾಕಿದ್ದು , ನನ್ನ ಮೊದಲ ರೀಲ್ ಗೆ ನನ್ನ ಫೇವರೇಟ್ ಸಾಂಗ್ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ..
ಅಲ್ಲದೇ ನಿರ್ಮಾಪಕ ತರುಣ್ ಸುಧೀರ್ ಸೇರಿದಂತೆ, ಇಡೀ ಚಿತ್ರತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದ್ದಾರೆ..