ಮಿಸೆಸ್ ಇಂಡಿಯಾ ಆದ ನಿವೇದಿತಾ ಗೌಡ..!!
ಇದೀಗ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಆಗಿದ್ದಾರೆ.. ಕಳೆದ 2 ತಿಂಗಳಿಂದ ಮಿಸೆಸ್ ಇಂಡಿಯಾ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ನಿವೇದಿತಾ ಕೊನೆಗೂ ಗೆದ್ದು ಮಿಸೆಸ್ ಇಂಡಿಯಾ ಕಿರೀಟ ತಮ್ಮದಾಗಿಸಿಕೊಂಡಿದ್ದಾರೆ..
ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ನಿವೇದಿತಾ ತಂಡ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ, ಅಲ್ಲವ. ಮಿಸೆಸ್ ಇಂಡಿಯಾ ಇಂಕ್ ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಅವರು ನಮ್ರತೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.