ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ಪ್ರತ್ಯೇಕವಾಗಿ ಹೇಳುವ ಅವಶ್ಯಕತೆ ಇಲ್ಲ. ಯಾರು ಏನು ಅಂದ್ರೂ ತಲೆ ಕಡೆಸಿಕೊಳ್ಳದ ರಾಮ್ ಗೋಪಾಲ್ ವರ್ಮಾ ಒಂದು ರೀತಿಯಾಗಿ ಸೋಲೋ ಮ್ಯಾನ್ ಇದ್ದಂತೆ.
ತಮಗೆ ಇಷ್ಟವಾಗಿದ್ದನ್ನೇ ಮಾಡುತ್ತಾ ಸುದ್ದಿಯಾಗುತ್ತಲೇ ಇರುತ್ತಾರೆ. ಆತ ಮಾಡುವ ಟ್ವೀಟ್ ಎಷ್ಟೋ ಜನರ ನಿದ್ರೆ ಕದಿಯುತ್ತೆ… ಮಾಡೆಲ್ಗಳ ಜತೆ ಬಾರ್ ನಲ್ಲಿ ಪಾರ್ಟಿ ಮಾಡುವುದು ಮತ್ತು ತಮ್ಮದೇ ಸಿನಿಮಾಗಳಲ್ಲಿ ನಟಿಸಿರುವ ನಟಿಯರ ಜತೆ ಪಬ್ ಗಳಲ್ಲಿ ತಮ್ಮಿಷ್ಟ ಬಂದಂತೆ ಇರೋದು.. ಟ್ರೋಲ್ ಆಗೋದು ಇದೆಲ್ಲಾ ಅವರಿಗೆ ಅಭ್ಯಾಸ ಹಾಗೂ ಹವ್ಯಾಸವೂ ಆಗಿಬಿಟ್ಟಿದೆ..
ಇದೀಗ ರಾಮ್ ಗೋಪಾಲ್ ವರ್ಮಾ ಅವರು ಕೋವಿಡ್ ಫೈಲ್ಸ್ ಹೆಸರಿನಲ್ಲಿ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ..
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವರ್ಮಾ, ತಾವು ಕೋವಿಡ್ ಫೈಲ್ಸ್ ಹೆಸರಿನ ಸಿನಿಮಾವನ್ನು ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಕೋವಿಡ್ ವೈರಸ್ ಕುರಿತು ಹಲವಾರು ಸತ್ಯ ಮಿಥ್ಯೆಗಳಿವೆ. ಅದರಿಂದಾಗಿ ಅದೆಷ್ಟೋ ಜನರ ಬದುಕು ಬೀದಿಗೆ ಬಿದ್ದಿದೆ. ಸರಿಯಾದ ರೀತಿಯಲ್ಲಿ ಟ್ರೀಟ್ಮೆಂಟ್ ಸಿಗದೇ ಲಕ್ಷಾಂತರ ಜನರು ಪ್ರಾಣ ಬಿಟ್ಟಿದ್ದಾರೆ. ಲಾಕ್ ಡೌನ್ ವೇಳೆಯಲ್ಲೂ ಹಲವು ರೀತಿ ಘಟನೆಗಳು ನಡೆದಿವೆ. ಸುಡಲು ಸ್ಮಶಾನವೂ ಸಿಗದೇ ಗೋಳಾಡಿದವರೂ ಇದ್ದಾರೆ. ಇವೆಲ್ಲವನ್ನೂ ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾ ಮಾಡಲಿದ್ದಾರೆ ಎನ್ನಲಾಗ್ತಿದೆ..