ಗಣೇಶ್ ಗಾಳಿಪಟ 2 ಸಿನಿಮಾದಲ್ಲಿ ಬ್ಯುಸಿಯಿದ್ದಾರೆ.. ಈ ಸಿನಿಮಾದ ಸ್ಯಾಂಡಲ್ ವುಡ್ ನ ಮೋಸ್ಟ್ ಆಂಟಿಸಿಪೇಟೆಡ್ ಸಿನಿಮಾಗಳಲ್ಲಿ ಒಂದಾಗಿದೆ.. ಈ ಸಿನಿಮಾದಲ್ಲಿ ಮತ್ತೆ ಯೋಗರಾಜ್ ಭಟ್ , ಗಣೇಶ್ , ಸೋನು ನಿಗಮ್ , ಜಯಂತ್ ಕಾಯ್ಕಿಣಿ ಕಾಂಬಿನೇಷನ್ ಒಂದಾಗಿದೆ.. ಹೀಗಾಗಿ ಈ ಸಿನಿಮಾ ಸೂಪರ್ ಹಿಟ್ ಆಗೋ ಜೊತೆಗೆ ಗಾಳಿಪಟ ಸಿನಿಮಾದಂತೆಯೇ ಈ ಸಿನಿಮಾದ ಹಾಡುಗಳು ಸಹ ಸೂಪರ್ ಹಿಟ್ ಆಗೋದ್ರಲ್ಲಿ ಡೌಟೇ ಇಲ್ಲ..
ಅಂದ್ಹಾಗೆ ಈ ಸಿನಿಮಾ ಮತ್ತೊಂದು ಹಾಡು ಈಗ ರಿಲೀಸ್ ಆಗಿ ಸೌಂಡ್ ಮಾಡ್ತಿದೆ..
ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ ಹಾಡು” ಎಂಬ ಹಾಡು ಇತ್ತೀಚೆಗೆ ರಿಲೀಸ್ ಆಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ನಿಹಾಲ್ ತಾವ್ರೋ ಹಾಡಿದ್ದಾರೆ.
ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.
ಆಗಸ್ಟ್ 12 ಕ್ಕೆ ಚಿತ್ರ ತೆರೆಗೆ ಬರಲಿದೆ.
ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾರಾವ್ ಮುಂತಾದವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ..