ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದ ಬೆನ್ನಲ್ಲೇ ಅಲರ್ಟ್ ಆಗಿರುವ ನಟ ತಮ್ಮ ಸೇಫ್ಟಿ ಬಗ್ಗೆ ಹೆಚ್ಚು ಗಮನ ವಹಿಸುತ್ತಿದ್ದಾರೆ..
ಇತ್ತೀಚೆಗೆ ಬುಲೆಟ್ ಫ್ರೂಫ್ ಕಾರು ಖರೀದಿ ಮಾಡಿದ್ದರು.. ಇದೀಗ ಅವರಿಗೆ ಶಸ್ತ್ರಾಸ್ತ್ರ ಪರವಾನಗಿಯೂ ಲಭಿಸಿದೆ..
ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಜೀವ ಬೆದರಿಕೆ ಬಂದ ಬೆನ್ನಲ್ಲೇ ಬಾಡಿಗಾರ್ಡ್ ಗಳ ಸಂಖ್ಯೆಯನ್ನೂ ಸಹ ಸಲ್ಮಾನ್ ಖಾನ್ ಹೆಚ್ಚಿಸಿಕೊಂಡಿದ್ದಾರೆ.
ಮೇ 29ರಂದು ಪಂಜಾಬ್ ನ ಮಾನ್ಸಾ ಬಳಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ಸಲ್ಮಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಕಳೆದ ತಿಂಗಳು ಸಲ್ಮಾನ್ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಶಸ್ತ್ರಾಸ್ತ್ರ ಪರವಾನಗಿ ನೀಡುವಂತೆ ಮನವಿ ಮಾಡಿದ್ದರು.
ಸಲ್ಮಾನ್ ಖಾನ್ ಮನೆಗೆ ಗೃಹ ಇಲಾಖೆ ಬಿಗಿಭದ್ರತೆಯನ್ನು ಒದಗಿಸಿದೆ. ಸಲ್ಮಾನ್ ಗೆ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗಿಯಾಗದಂತೆ ಮತ್ತು ಅತೀ ಹೆಚ್ಚು ಜನಸಂದಣಿ ಇರುವ ಕಡೆ ಓಡಾಡದಿರಲು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದಾರೆಂಬ ಮಾಹಿತಿಯೂ ಇದೆ..
ಅಷ್ಟೇ ಅಲ್ದೇ ಪೊಲೀಸರ ಸಲಹೆ ಮೇರೆಗೆ ಸಲ್ಮಾನ್ ಖಾನ್ ಅವರು ಬುಲೆಟ್ ಪ್ರೂಫ್ ಕಾರು ಖರೀದಿಸಿದ್ದಾರೆ ಎಂದು ಹೇಳಲಾಗುತ್ತದೆ.