Samantha : ಹೊಸ ಸಿನಿಮಾಗೆ ಒಂದಾಗಲಿದ್ದಾರೆ ಸಮಂತಾ – ನಾಗಚೈತನ್ಯ
ಮತ್ತೆ ಸಿನಿಮಾದಲ್ಲಿ ಒಂದಾಗ್ತಿದ್ದಾರೆ ಸಮಂತಾ – ನಾಗಚೈತನ್ಯ..!!!
10 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಟಾಲಿವುಡ್ ನ ಸ್ಟಾರ್ ಕಪಲ್ ಸಮಂತಾ ನಾಗಚೈತನ್ಯ ಡಿವೋರ್ಸ್ ಪಡೆದಿದ್ದು ತಮ್ಮ ನಾಲ್ಕು ವರ್ಷಗಳ ದಾಂಪತ್ಯಕ್ಕೆ ಇತಿಶ್ರೀ ಹಾಡಿದ್ದಾರೆ..
ಇವರ ಡಿವೋರ್ಸ್ ಸುದ್ದಿಯಿಂದ ಅಭಿಮಾನಿಗಳು ಸಿಕ್ಕಾಪಟ್ಟೆ ಶಾಕ್ ಆಗಿದ್ದರು.. ಇವರಿಬ್ಬರೂ ಸಹ ಈ ವಿಚಾರವಾಗಿ ಮೌನವಾಗಿದ್ರೂ ನೆಟ್ಟಿಗರು ಸೈಲೆಂಟ್ ಇರಲ್ಲ.. ಈವರೆಗೂ ಇಬ್ಬರ ಅಭಿಮಾನಿಗಳೂ ಪರಸ್ಪರರನ್ನ ಟ್ರೋಲ್ ಮಾಡ್ತಾ ಬಂದಿದ್ದಾರೆ.. ಇಬ್ಬರೂ ಸದ್ಯ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ..
ಈ ಜೋಡಿ ಮತ್ತೆ ಒಂದಾಗಬೇಕೆಂಬ ಆಶಯ ಅಭಿಮಾನಿಗಳದ್ದು.. ಅವರ ಆಸೆ ಕನಸಿಗೆ ಈಗ ಹೊಸ ಭರವಸೆಯಂತೆ ಒಂದು ಸೆನ್ಷೇಷನಲ್ ಸುದ್ದಿ ಟಾಲಿವುಡ್ ಅಂಗಳದಲ್ಲಿ ಬಾರೀ ಸೌಂಡ್ ಮಾಡ್ತಿದೆ..
ಸಂದರ್ಶನವೊಂದ್ರಲ್ಲಿ ಸಮಂತಾ ಜೊತೆ ನೀವು ಮತ್ತೆ ಸಿನಿಮಾ ಮಾಡುತ್ತೀರಾ ಎಂದು ಕೇಳಿರುವ ನಿರೂಪಕಿಯ ಪ್ರಶ್ನೆಗೆ ಉತ್ತರಿಸುತ್ತಾ ಇಂತಹ ಪರಿಸ್ಥಿತಿ ಒದಗಿ ಬಂದರೆ ಅದು ಹುಚ್ಚುತನವಾಗುತ್ತದೆ. ಅದು ನನಗೆ ಗೊತ್ತಿಲ್ಲ. ಇದನ್ನ ಕಾಲವೇ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.