ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ… ಅವರ ಅಭಿನಯದ ಸಾಲು ಸಾಲು ಸಿನಿಮಾಘಳು ರಿಲೀಸ್ ಗ್ಎ ರೆಡಿಯಾಗಿವೆ.. ಬಾಲಿವುಡ್ ನಲ್ಲಿ ಎರೆಡು ಸಿನಿಮಾಗಳ ಶೂಟಿಂಗ್ ಮುಗಿಸಿರುವ ರಶ್ಮಿಕಾ ರಣಬೀರ್ ಕಪೂರ್ ಜೊತೆಗೆ ಅನಿಮಲ್ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ.. ತಮಿಳಿನಲ್ಲಿ ದಳಪತಿ ವಿಜಯ್ ಅವರ 66 ನೇ ಸಿನಿಮಾದಲ್ಲಿ ನಾಐಕಿಯಾಗಿ ಆಯ್ಕೆಯಾಗಿದ್ದಾರೆ..
ಬಹುನಿರೀಕ್ಷೆಯ ಪುಷ್ಪ 2 ನಲ್ಲೂ ಬ್ಯುಸಿಯಿದ್ದು , ಅವರ ಅಭಿನಯದ ಮೊಟ್ಟ ಮೊದಲ ಮಾಲಿವುಡ್ ಸಿನಿಮಾ ರಿಲೀಸ್ ಆಗಲು ರೆಡಿಯಾಗಿದ್ದು , ಈ ಮೂಲಕ ಮಾಲಿವುಡ್ ನಲ್ಲೂ ಮಿಂಚಲು ಸಜ್ಜಾಗಿದ್ದಾರೆ ಸಾನ್ವಿ.. ಆದರೆ ಇದೀಗ ಅವರ ಮಲಯಾಳಂ ಸಿನಿಮಾಗೆ ಅಡಚಣೆ ಎದುರಾಗಿದೆ..
‘ಸೀತಾ ರಾಮಂ’ ಚಿತ್ರದಲ್ಲಿ ದುಲ್ಕರ್ ಸಲ್ಮಾನ್, ಮೃಣಾಲ್ ಜೊತೆಗೆ ರಶ್ಮಿಕಾ ಬಣ್ಣ ಹಚ್ಚಿದ್ದಾರೆ.. ಮುಸ್ಲಿಂ ಯುವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು , ಅವರ ಫಸ್ಟ್ ಲುಕ್ ಸಿಕ್ಕಾಪಟ್ಟೆ ಸೆನ್ಷೇಷನ್ ಹುಟ್ಟುಹಾಕಿತ್ತು.. ಆದ್ರೆ ಈ ಸಿನಿಮಾವನ್ನ ಹಲವು ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ.
ಹನು ರಾಘವಪುಡಿ ನಿರ್ದೇಶನದ `ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಆಫ್ರೀನ್ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಅಂಶಗಳಿವೆ ಎಂದು ಆರೋಪಿಸಿ ಅರಬ್ ರಾಷ್ಟ್ರಗಳಲ್ಲಿ ಈ ಚಿತ್ರದ ರಿಲೀಸ್ ಗೆ ನಿರ್ಬಂಧ ವಿಧಿಸಲಾಗಿದೆ..
ಬಹ್ರೇನ್, ಓಮನ್, ಕುವೈತ್, ಖತಾರ್, ಸೌದಿ ಅರೇಬಿಯಾ ಸೇರಿ ಹಲವು ದೇಶಗಳಲ್ಲಿ ಈ ಸಿನಿಮಾವನ್ನ ಬ್ಯಾನ್ ಮಾಡಲಾಗಿದೆ.. ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಸದಸ್ಯರ ಅಭಿಪ್ರಾಯದ ಮೇರೆಗೆ ಈ ಚಿತ್ರವನ್ನು ಬ್ಯಾನ್ ಮಾಡಲಾಗಿದೆ.
ಇನ್ನೂ ಚಿತ್ರತಂಡದಿಂದ ಮತ್ತೊಮ್ಮೆ ಸೆನ್ಸಾರ್ ಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.