ಹೊಂಬಾಳೆ ಫಿಲಮ್ಸ್ ಬ್ಯಾನರ್ ನ ಅಡಿ ನಿರ್ಮಾಣವಾಗಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕನ್ನಡದ ಬಹುನಿರೀಕ್ಷೆಯ ಸಿನಿಮಾಗಳ ಪೈಕಿ ಒಂದಾದ ‘ಕಾಂತಾರ’ ಸಿನಿಮಾದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ 15 ಕ್ಕೆ ರಿಲೀಸ್ ಆಗ್ತಿದೆ..
ಪ್ರಮೋದ್ ಮರವಂತೆ ರಚಿಸಿರುವ ಸಿಂಗಾರ ಸಿರಿಯೆ ಎಂಬ ಟೈಟಲ್ ನ ಹಾಡು ರಿಲೀಸ್ ಆಗಲಿದೆ.. ಈ ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿಹಿಡಿಯಲಾಗಿದೆ. ಅಂದ್ಹಾಗೆ ಈ ಹಾಡಿಗೆ ಗಾಯಕ ವಿಜಯ್ ಪ್ರಕಾಶ್ , ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರು ಧ್ವನಿಯಾಗಿರುವುದು ವಿಶೇಷ..
ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಸಿನಿಮಾದ ಟೀಸರ್ ರಿಲೀಸ್ ಆಗಿ ಭಾರೀ ಸದ್ದು ಮಾಡಿದೆ.. ಈ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಮಾಡುವ ನಿರೀಕ್ಷೆಯಿದೆ..
ಅಂದ್ಹಾಗೆ ಸಿನಿಮಾ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.