Kantara : ಸಿಂಗಾರ ಸಿರಿಯೇ ಸಾಂಗ್ ರಿಲೀಸ್…!!!
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ ಚಿತ್ರ ಸಿಂಗಾರ ಸಿರಿಯೇ ಹಾಡು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್ ನಲ್ಲಿ ಹಾಡು ಬಿಡುಗಡೆಯಾಗಿದೆ.
ವಿಜಯ್ ಕಿರಗಂದೂರು ಬಂಡವಾಳ ನಿರ್ಮಾಣವಾಗುತ್ತಿರುವ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಪ್ರಮೋದ ಮರವಂತೆ ಬರೆದಿರುವ ಸಿಂಗಾರ ಸಿರಿಯೇ ಹಾಡಿಗೆ ವಿಜಯ್ ಪ್ರಕಾಶ್ ಮತ್ತು ಅನನ್ಯ ಭಟ್ ಧ್ವನಿಗೂಡಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಜಾನಪದದ ಸೊಗಡಿನಲ್ಲಿ ಹಾಡು ಮೂಡಿಬಂದಿದೆ.
ಈ ಚಿತ್ರ ಸೆಪ್ಟಂಬರ್ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.