GajaRama Kannada Film : ʼಗಜರಾಮ’ನಾದ ರಾಜವರ್ಧನ್…ಡಿಂಗ್ರಿ ನಾಗರಾಜ್ ಪುತ್ರನ ಹೊಸ ಕನಸು
ಮ್ಯಾಸಿವ್ ಸ್ಟಾರ್ ರಾಜವರ್ಧನ್ ಈಗ ಫುಲ್ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ರಾಜವರ್ಧನ್ ಅಕೌಂಟ್ ಗೆ ಹೊಸ ಚಿತ್ರವೊಂದು ಸೇರ್ಪಡೆಯಾಗಿದೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ ಸಾರಥ್ಯದಲ್ಲಿ ಮೂಡಿ ಬರ್ತಿರುವ ಗಜರಾಮ ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸುತ್ತಿದ್ದು, ಇದೀಗ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ರಗಡ್ ಲುಕ್ ನಲ್ಲಿ ಡಿಂಗ್ರಿ ನಾಗರಾಜ್ ಪುತ್ರ ಕಾಣಿಸಿಕೊಂಡಿದ್ದಾರೆ.
ನಿರ್ದೇಶಕರಾದ ಯೋಗರಾಜ್ ಭಟ್, ಸೂರಿ ಗರಡಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್ ಗಜರಾಮ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟರ್ ಟ್ರೈನರ್ ಗಜರಾಮ ಚಿತ್ರಕ್ಕೆ ಮನೋಮೂರ್ತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ.
ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಚಿತ್ರದ ಶೂಟಿಂಗ್ ಶುರುವಾಲಿದ್ದು, ಉಳಿದ ತಾರಾಬಳಗವನ್ನು ಶೀಘ್ರದಲ್ಲಿ ಚಿತ್ರತಂಡ ಪರಿಚಯಿಸಲಿದೆ. ಸದ್ಯ ರಾಜವರ್ಧನ್ ಭತ್ತಳಿಕೆಯಲ್ಲಿ ಹಿರಣ್ಯ, ಪ್ರಣಯಂ ಸಿನಿಮಾಗಳಿದ್ದು, ಇದೀಗ ಗಜರಾಮ ಚಿತ್ರ ಸೇರ್ಪಡೆಯಾಗಿದೆ. ಇನ್ನೂ ಇದೇ ನಿರ್ಮಾಣ ಸಂಸ್ಥೆಯ ಸಿನಿಮಾ ಬಾಂಡ್ ರವಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿದೆ.