ದಿಟ್ಟ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶ್ ರ ಜೀವನ ಆಧಾರಿತ ಸಾಕ್ಷ್ಯಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ..
ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಬಯೋಪಿಕ್ ಸಿನಿಮಾ ಗೌರಿ ಚಿತ್ರಕ್ಕೆ ಟೆರಂಟೊ ವುಮೆನ್ಸ್ ಫಿಲ್ಮಂ ಫೆಸ್ಟಿವಲ್ 2022ರ ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿ ಸಿಕ್ಕಿದೆ..
ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಅವರು ಗೌರಿ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕೆನಾಡಾದ ಮಾಂಟ್ರಿಯಲ್ ನಲ್ಲಿ ನಡೆಯಲಿರುವ ಪ್ರತಿಷ್ಠಿತ ದಕ್ಷಿಣ ಏಷ್ಯಾ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕವಿತಾ ಲಂಕೇಶ್ ಅವರು ನನ್ನ ನಿರ್ದೇಶನದ ‘ಗೌರಿ’ ಸಾಕ್ಷ್ಯ ಸಿನಿಮಾಗೆ ಟೊರೆಂಟೋ ಫಿಲ್ಮ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಮಾನವ ಹಕ್ಕುಗಳ ಸಿನಿಮಾ ಪ್ರಶಸ್ತಿ ಗಳಿಸಿದೆ..
ಈ ಖುಷಿಯ ವಿಚಾರವನ್ನು ನಿಮ್ಮ ಜೊತೆ ಹಂಚಿಕೊಳ್ಳುತ್ತಿದ್ದೇನೆ. ಗೌರಿ ಧ್ವನಿ ಮತ್ತೆ ಮತ್ತೆ ಮಾರ್ಧನಿಸಲಿ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು ಎಂದು ತಮ್ಮ ಬರೆದುಕೊಂಡಿದ್ದಾರೆ..