ಸ್ಯಾಂಡಲ್ ವುಡ್ ನ ವರ್ ಗ್ರೀನ್ ನಟ ರಮೇಶ್ ಅರವಿಂದ್ ಅವರಿಗೆ ಇತ್ತೀಚೆಗಷ್ಟೇ ಗೌರವ ಡಾಕ್ಟರೇಟ್ ಸಿಕ್ಕಿತ್ತು… ಇದೀಗ ರಮೇಶ್ ಅವರಿಗೆ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಲಭಿಸಿದೆ
ಉಡುಪಿಯ ಕೋಟ ತಟ್ಟು ಗ್ರಾಮ ಪಂಚಾಯತ್ ನೀಡುವ ಕಾರಂತ ಹುಟ್ಟೂರು ಪ್ರಶಸ್ತಿಗೆ ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 10 ರಂದು ನಡೆಯಲಿರುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕಳೆದ ಹದಿನೇಳು ವರ್ಷಗಳಿಂದ ಈ ಪ್ರಶಸ್ತಿಯನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ನೀಡಲಾಗುತ್ತಿದೆ. ರಮೇಶ್ ಅರವಿಂದ್ ಅವರ ವ್ಯಕ್ತಿತ್ವ ವಿಕಾಸನ ನಿರೂಪಣೆ ಮತ್ತು ನಟನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುವುದು.