ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷೆಯ ರಾಮ್ ಸೇತು ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.. ಟೀಸರ್ ಅದ್ಭುತವಾಗಿ ಮೂಡಿಬಂದಿದ್ದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿಸಿದೆ..
ಸಾಲು ಸಾಲು ಸೋಲುಂಡು ಬೇಸತ್ತಿದ್ದ ಬಾಲಿವುಡ್ ಗೆ ಬ್ರಹ್ಮಾಸ್ತ್ರ ನವಚೈತನ್ಯ ತಂದಿರುವ ಬೆನ್ನಲ್ಲೇ ಈ ಸಿನಿಮಾ ಬಾಲಿವುಡ್ ಗೆ ಮರು ಜೀವ ನೀಡಲಿದೆ ಎಂದೇ ಹೇಳಲಾಗ್ತಿದೆ..
ಅಕ್ಷಯ್ ಕುಮಾರ್ ಅಭಿನಯದ ರಾಮ್ ಸೇತು 2022 ರ ದೀಪಾವಳಿಯಲ್ಲಿ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುವ ನಿರೀಕ್ಷೆಯಿದೆ.. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ನಂತರ, ಚಲನಚಿತ್ರವು ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ಪ್ರತ್ಯೇಕವಾಗಿ ಸ್ಟ್ರೀಮ್ ಆಗುತ್ತದೆ.
ರಾಮ್ ಸೇತು ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ನುಶ್ರತ್ ಭರುಚಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.