ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರು ತಮ್ಮ ಪತ್ನಿ ಸ್ನೇಹಾ ರೆಡ್ಡಿ ಅವರ ಜನ್ಮದಿನವನ್ನು ಅಮೃತಸರದ ಗೋಲ್ಡನ್ ಟೆಂಪಲ್‌ನಲ್ಲಿ ಅವರ ಮಕ್ಕಳಾದ ಅಯಾನ್ ಮತ್ತು ಅರ್ಹಾ ಜೊತೆಗೂಡಿ ಆಚರಿಸುವ ಮೂಲಕ ವಿಶೇಷಗೊಳಿಸಿದ್ದಾರೆ.
ಈ ವೇಳೆ ಅಲ್ಲು ಅರ್ಜುನ್ ನೋಡಲು ಅಭಿಮಾಣಿಗಳು ಜಮಾಯಿಸಿದ್ದು , ಅಮೃತ್ ಸರದಲ್ಲಿ ಅಲ್ಲು ಕುಟುಂಬದ ಮುದ್ದಾದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದ್ದು , ನೆಟ್ಟಿಗರು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ..
ಪ್ರಸ್ತುತ ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದಲ್ಲಿ ಅಕ್ಟೋಬರ್ ಮೊದಲ ವಾರದಿಂದ ಬ್ಯುಸಿಯಾಗಲಿದ್ದು , ಅದಕ್ಕೂ ಮೊದಲು ಫ್ಯಾಮಿಲಿ ಜೊತೆಗೆ ಸಮಯ ಕಳೆಯುತ್ತಿದ್ದಾರೆ..