Hamsalekha : ನಾದ ಬ್ರಹ್ಮ ಹಂಸಲೇಖ ಅವರಿಗೆ ಎದೆನೋವು , ಆಸ್ಪತ್ರೆಗೆ ದಾಖಲು
ಸಂಗೀತ ಲೋಕದ ದಿಗ್ಗಜ ನಾದ ಬ್ರಹ್ಮ ಹಂಸಲೇಖ ಅವರಿಗೆ ಧಿಡೀರ್ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಇದ್ರಿಂದಾಗಿ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ..
ಆದ್ರೆ ಯಾವುದೇ ಆತಂಕ ಪಡೆಯುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ತಿಳಿದುಬಂದಿದೆ.. ಯಾವುದೇ ದೊಡ್ಡ ಸಮಸ್ಯೆಯಾಗಿಲ್ಲ.. ಎಂದು ಕೇವಲ ಗ್ಯಾಸ್ಟಿಕ್ ಸಮಸ್ಯೆ ಎನ್ನಲಾಗಿದ್ದು ಅಭಿಮಾನಿಗಳು ಕೊಂಚ ನಿರಾಳರಾಗಿದ್ದಾರೆ.. ಈ ಹಿಂದೆ ಹಂಸಲೇಖ ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪರಿಣಾಮ ಅಭಿಮಾನಿಗಳಲ್ಲಿ ಕೊಂಚ ಆತಂಕ ಮೂಡಿತ್ತು..
ರಾಜಾಜಿನಗರದ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.. ಜನರಲ್ ವಾರ್ಡ್‌ನಲ್ಲೇ ಒಂದು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಒಂದು ದಿನದ ನತರ ಹಂಸಲೇಖ ಅವರು ಡಿಶ್ಚಾರ್ಜ್ ಆಗಲಿದ್ದಾರೆ.