Vikranth Rona : ಥಿಯೇಟರ್ ಗಳಲ್ಲಿ ಅಬ್ಬರಿಸಿ , ottಯಲ್ಲೂ ಹಿಟ್ ಆದ ‘ವಿಕ್ರಾಂತ್ ರೋಣ’ ಟಿವಿ ಎಂಟ್ರಿಗೆ ಡೇಟ್ ಫಿಕ್ಸ್..!!
ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು ನಿಮಿಷದಲ್ಲಿ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ 3 ಸ್ಥಾನ ಕೂಡ ಗಿಟ್ಟಿಸಿಕೊಂಡಿದೆ.
ಥಿಯೇಟರ್ ಗಳು ಹಾಗೂ ಒಟಿಟಿಯಲ್ಲೂ ಅಬ್ಬರಿಸಿ ಬೊಬ್ಬಿರಿದ ವಿಕ್ರಾಂತ್ ರೋಣ ಶೀಘ್ರವೇ ಟಿವಿಯಲ್ಲಿ ಪ್ರಸಾರವಾಗಲಿದೆ.. ಡೇಟ್ ಕೂಡ ರಿವೀಲ್ ಆಗಿದೆ.. ರಾ ರಕ್ಕಮ್ಮ ಹಾಡುʼ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದು ಈಗಲೂ ಸೋಷಿಯಲ್ ಮೀಡಿಯಾದಲ್ಲಿ, ರೀಲ್ಸ್ ಗಳಲ್ಲಿ ಅತಿಹೆಚ್ಚು ಬಳಕೆಯಲ್ಲಿದೆ. ಇದೇ ಅಕ್ಟೋಬರ್ 15 ಶನಿವಾರ ರಾತ್ರಿ 7.30ಕ್ಕೆ ಈ ಸಿನಿಮಾ ಟಿವಿಯಲ್ಲಿ ಬರಲಿದೆ…