Kantara : ಸಿನಿಮಾ ನೋಡಿ ಹೊಗಳಿದ ಧರ್ಮಸ್ಥಳ ಧರ್ಮಾಧಿಕಾರಿಗಳು
ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿರು ಕಾಂತಾರಕ್ಕೆ ಎಲ್ಲಾ ಭಾಷೆಯ ಅಭಿಮಾನಿಗಳು ಫಿದಾ ಆಗಿದ್ದಾರೆ.. ಪರ ಭಾಷಾ ಸ್ಟಾರ್ ಗಳು ಸಿನಿಮಾವನ್ನ ಕೊಂಡಾಡುತ್ತಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾವನ್ನ ಇತ್ತೀಚೆಗೆ ( ಅಕ್ಟೋಬರ್ 21) ಮಂಗಳೂರಿನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವೀಕ್ಷಿಸಿದ್ದಾರೆ..
ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ವೀರೇಂದ್ರ ಹೆಗ್ಗಡೆ ಅವರು ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ ವೀಕ್ಷಣೆ ಬಳಿಕ ಈ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ತುಳುನಾಡಿದ ದೈವಾರಾಧನೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ ಶೆಟ್ಟಿ ದೈವಾರಾಧನೆಯ ಸೂಕ್ಷ್ಮತೆಯನ್ನು ಬಹಳ ಚೆನ್ನಾಗಿ ಚಿತ್ರಿಸಿದ್ದಾರೆ. ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ.
ಸಮಾಜದಲ್ಲಿ ಸ್ವಾರ್ಥಿಗಳು ಇರುತ್ತಾರೆ. ಆದರೆ ನಮ್ಮ ದೈವಗಳು ಯಾವುದಕ್ಕೂ ಬೆಂಬಲ ಕೊಡೋದಿಲ್ಲ ಎನ್ನುವುದನ್ನು ಈ ಸಿನಿಮಾ ಮತ್ತೆ ತೋರಿಸಿಕೊಟ್ಟಿದೆ. ಇದು ಒಳ್ಳೆಯ ಸಂದೇಶ ಅಂತ ಅನಿಸಿದೆ ಎಂದಿದ್ದಾರೆ.
ನಮ್ಮ ನಂಬಿಕೆ ಆಚರಣೆಗಳು ಸ್ವಾಭಾವಿಕವಾಗಿ ಬೆಳೆದು ಬಂದದ್ದು ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ನಾವೆಲ್ಲ ಇವತ್ತಿಗೂ ದೈವಾರಾಧನೆ ಮಾಡುತ್ತೇವೆ. ದೈವದ ನುಡಿಗೆ ಗೌರವ ಕೊಡುತ್ತೇವೆ. ದೈವ ಮೈಮೇಲೆ ಬಂದಾಗ ಅದಕ್ಕೆ ಗೌರವ ಕೊಡುತ್ತೇವೆ.
ಚಿತ್ರದಲ್ಲಿ ಯುವಕರಿಗೆ ಹೊಸ ಕಥೆ ,ಹಳೆಯ ಸ್ಮರಣೆ ಆಗುತ್ತದೆ. ಈ ಚಿತ್ರದಲ್ಲಿ ಹೊಸ ದೃಷ್ಠಿಕೋನವಿದೆ…
ಜಾತಿ ಮತ ಬೇಧ ಮರೆತು ಸಹಬಾಳ್ವೆ ಮಾಡಬೇಕೆಂಬ ಸಂದೇಶ ಈ ಚಿತ್ರದಲ್ಲಿದೆ. ಕಾಂತಾರ ಚಿತ್ರ ನೋಡಿ ಬಹಳ ಸಂತೋಷವಾಗಿದೆ. ಚಿತ್ರ ನೋಡಿದ ಬಳಿಕ ಈ ಗುಂಗಿನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ.
ಎಲ್ಲಾ ಕಲಾವಿದರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಬೆಳೆಯುತ್ತಿರುವ ತಂತ್ರಜ್ಞಾನ ವನ್ನು ರಿಷಬ್ ಶೆಟ್ಟಿ ಹೇಗೆ ಬಳಸಿದ್ದಾರೆ ಅನ್ನೋದು ಚಿತ್ರದಲ್ಲಿ ನೋಡಿದ್ದೇನೆ. ಕಲಾವಿದರು, ನಿರ್ಮಾಪಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.