Karnataka Film Academy ಅಧಿಕಾರ ಸ್ವೀಕರಿಸಿದ ಖ್ಯಾತ ಛಾಯಾಗ್ರಾಹಕ ಅಶೋಕ್ ಕಶ್ಯಪ್..!!
ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.. ಸುನಿಲ್ ಪುರಾಣಿಕ್ ಅವರಿಂದ ತೆರಾವಗಿದ್ದ ಸ್ಥಾನಕ್ಕೆ ಅಶೋಕ್ ಅವರನ್ನ ನೇಮಿಸಲಾಗಿದೆ ಎಂದು ಇತ್ತೀಚೆಗೆ ತಿಳಿಸಲಾಗಿತ್ತು.. ಇದೀಗ ಇಂದು ಅಶೋಕ್ ಅಧಿಕಾರ ಸ್ವೀಕಾರ ಮಾಡಿದ್ದಾರೆ..
ಕನ್ನಡ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರನ್ನು ನೇಮಕ ಮಾಡಿ, ಸರಕಾರ ಆದೇಶ ಹೊರಡಿಸಿತ್ತು.. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ , ಬೆಂಗಳೂರು ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಆದೇಶವನ್ನು ಹೊರಡಿಸಿದ್ದರು..
ಇದೀಗ ಅಧಿಕಾರ ವಹಿಸಿಕೊಂಡಿದ್ದಾರೆ.. ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಅಂದ್ಹಾಗೆ ಇವರು ಲಿಫ್ಟ್ ಕೊಡ್ಲಾ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿ, ರಾಷ್ಟ್ರ ಪ್ರಶಸ್ತಿ ಪಡೆದ ತಲೆದಂಡ ಸಿನಿಮಾಗೆ ಅಶೋಕ್ ಕಶ್ಯಪ್ ಅವರೇ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ..