Vishal : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ವಿಶಾಲ್ ಭೇಟಿ..!!
ಕಾಲಿವುಡ್ ಸ್ಟಾರ್ ನಟ ವಿಶಾಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಮಾಡಿಸಿದ್ದಾರೆ..
ಈ ವೇಳೆ ವಿಶಾಲ್ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದರು.. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಟನನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ..
ಪ್ರಸ್ತುತ ವಿಶಾಲ್ ಲಾಠಿ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ.. ಈ ಸಿನಿಮಾದ ಮೂಲಕ ಅವರು ಖಡಕ್ ಪೊಲೀಸ್ ಆಫೀಸರ್ ಆಗಿ ಮಿಂಚಲಿದ್ದಾರೆ..