Kamal Hassan : ಸೌತ್ ನ ಸೂಪರ್ ಸ್ಟಾರ್ ಕಮಲ್ ಹಾಸನ್ ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು
ತಮಿಳಿನ ಸೂಪರ್ ಸ್ಟಾರ್ , ಸೌತ್ ಸಿನಿಮಾ ಇಂಡಸ್ಟ್ರಿಯ ಲೆಜೆಂಡ್ ನಟ ಕಮಲ್ ಹಾಸನ್ ಅವರು ಅನಾರೋಗ್ಯ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ..
( ನವೆಂಬರ್) ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್‌ಗೆ ದಾಖಲಾಗಿದ್ದಾರೆ.
ಕೆಲವು ದಿನಗಳಿಂದ ಅವರು ತೀರ್ವ ಜ್ವರದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಜ್ವರ ಕಡಿಮೆ ಆಗದ ಕಾರಣಕ್ಕಾಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಕಮಲ್ ಹಾಸನ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ..
ಕಮಲ್ ಹಾಸನ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಸದ್ಯ ಕಮಲ್ ಹಾಸನ್ ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಬಹುದು ಎನ್ನಲಾಗುತ್ತಿದೆ. ಇದೀಗ ಜ್ವರ ಕೂಡ ಕಡಿಮೆ ಆಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸದ್ಯ ತಮಿಳಿನ ಬಿಗ್ ಬಾಸ್ ನಿರೂಪಣೆ ಮಾಡ್ತಿರುವ ಕಮಲ್ ಹಾಸನ್ ಕೆಲದಿನಗಳ ವರೆಗೂ ವೀಕೆಂಡ್ ಸಂಚಿಜಕೆಯಿಂದ ಬ್ರೇಕ್ ಪಡೆಯುವ ಸಾಧ್ಯತೆಯಿದೆ.. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವಕಮಲ್ ಹಾಸನ್ ಅವರು ವಿಶ್ರಮಿಸಿದೇ ಕೆಲಸ ಮಾಡ್ತಿರೋದೇ ಅವರು ಹುಷಾರು ತಪ್ಪಲು ಕಾರಣವೆನ್ನಲಾಗ್ತಿದೆ..
Kamal Hassan hospitalized