Siddaramaih : ಮಾಜಿ ಸಿಎಂ ಸಿದ್ದರಾಮಯ್ಯರ ಬಯೋಪಿಕ್..! ಹೀರೋ ವಿಜಯ್ ಸೇತುಪತಿ.???
ಸಿನಿಮಾರಂಗದಲ್ಲಿ ಒಂದ್ ರೀತಿ ಸದ್ಯಕ್ಕೆ ಬಯೋಪಿಕ್ ಮೇನಿಯಾ ಚಾಲೂ ಇದೆ.. ಬಾಲಿವುಡ್ ನಲ್ಲಂತೂ ಬಯೋಪಿಕ್ ದೇ ಹವಾ ಇದೆ..
ಇದೀಗ ಮಾಜಿ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಾದಿಯ ಬಗ್ಗೆ ಬಯೋಪಿಕ್ ತರಲು ಸದ್ದಿಲ್ಲದೇ ತಯಾರಿ ನಡೆಯುತ್ತಿದೆ ಎನ್ನಲಾಗ್ತಿದೆ..
ಇದೀಗ ಈ ಬಗ್ಗೆ ಮತ್ತೊಂದು ಇಂಟ್ರೆಸ್ಟಿಂಗ್ ಅಪ್ ಡೇಟ್ ಸಿಕ್ಕಿದೆ,..
ವಿಧಾನಸಭಾ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಬಯೋಪಿಕ್ ನಲ್ಲಿ ಸೌತ್ ನ ಸ್ಟಾರ್ ನಟ ವರ್ಸಟೈಲ್ ಆಕ್ಟರ್ ವಿಜಯ್ ಸೇತುಪತಿ ಬಣ್ಣ ಹಚ್ಚಲಿದ್ದಾರೆ ಎನ್ನಲಾಗ್ತಿದೆ..
ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ ಸಜ್ಜಾಗಿದ್ದಾರೆ..
ಕೊಪ್ಪಳ ಮೂಲದ ನಿರ್ಮಾಪಕರು ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂಬ ಮಾಹಿತಿಯಿದೆ.. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ.
ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನುತ್ತಿದೆ ಮೂಲಗಳು.