Abhishek ambarish – aviva : ಅದ್ಧೂರಿ ನಿಶ್ಚಿತಾರ್ಥ
ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಾಲತಾ ಅವರ ಪುತ್ರ ,. ಯುವ ನಟ ಯಂಗ್ ರೆಬೆಲ್ ಸ್ಟಾರ್ ಅಭಿಶೇಕ್ ಅಂಬರೀಷ್ ಅವರು ಬಹುಕಾಲದ ಗೆಳತಿ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಜೊತೆಗೆ ಐಶಾರಾಮಿ ಹೊಟೆಲ್ ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ..
ಅವರ ಎಂಗೇಜ್ ಮೆಂಟ್ ಫೋಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ..
ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಜೊತೆ ಎಂಗೇಜ್‌ಮೆಂಟ್ ನೆರವೇರಿದೆ. ಈ ವೇಳೆ ಅಭಿಷೇಕ್ ತಾಯಿ ಸುಮಲತಾ ಅಂಬರೀಶ್, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಜರಿದ್ದು, ಜೋಡಿಗಳಿಗೆ ಶುಭಹಾರೈಸಿದರು.
ಚಿತ್ರರಂಗದ ಗಣ್ಯರು ಹೊಸ ಜೋಡಿಗೆ ಶುಭಹಾರೈಸಿದ್ದಾರೆ. ಇನ್ನೂ ಅಭಿಷೇಕ್ ಮುಂದಿನ ಚಿತ್ರಕ್ಕೆ ಡೈರೆಕ್ಷನ್ ಮಾಡುತ್ತಿರುವ ಎಸ್. ಮಹೇಶ್ ಕುಮಾರ್ ಕೂಡ ನಿಶ್ಚಿತಾರ್ಥಕ್ಕೆ ಭಾಗಿಯಾಗಿದ್ದರು..
ಅಲ್ಲದೇ ಯಶ್ ರಾಧಿಕಾ ದಂಪತಿ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು..
Abhishek ambarish – aviva , cinibazaar