Prashanth Sambargi ವಿರುದ್ಧ ಶೃತಿ ಹರಿಹರನ್ ದಾಖಲಿಸಿದ್ದ ಕೇಸ್ ಗೆ ತಡೆಯಾಜ್ಞೆ…!!
#Metoo ಅಭಿಯಾನದ ವೇಳೆ ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಅರ್ಜುನ್ ಸರ್ಜಾರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದರು.. ಇದು ಚಂದನವನದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು..
ಇದೇ ಪ್ರಕರಣದ ವೇಳೆ ಅರ್ಜುನ್ ಸರ್ಜಾ ಬೆಂಬಲಕ್ಕೆ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಬಂದಿದ್ದರು.. ಮಾಧ್ಯಮಗಳ ಜೊತೆ ಮಾತನಾಡಿದ್ದರು ಕೂಡ..
ಹೀಗೆ ಮಾತನಾಡುವಾಗ ಪ್ರಶಾಂತ್ ಸಂಬರ್ಗಿ ತಮ್ಮ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಕೇಸ್ ನಡೆಯುತ್ತಿದೆ.. ಈ ಪ್ರಕರಣ ತಡೆಯಾಜ್ಞೆ ಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠವು ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ವಿಚಾರಣೆಯನ್ನು 2023ರ ಫೆಬ್ರುವರಿ 1ಕ್ಕೆ ಮುಂದೂಡಿದೆ.