Puneeth Rajkumar : ‘ನೀನೇ ರಾಜಕುಮಾರ’ 4 ನೇ ಆವೃತ್ತಿ ರಿಲೀಸ್..!!
ಲೇಖಕರಾದ ಶರಣು ಹುಲ್ಲೂರು ಅವರು ಬರೆದ ಪುನೀತ್ ರಾಜ ಕುಮಾರ ಕುರಿತಾದ ಬಯೋಗ್ರಫಿ ‘ನೀನೇ ರಾಜಕುಮಾರ್’ ಪುಸ್ತಕದ 4ನೇ ಆವೃತ್ತಿ ಇಂದು ಬಿಡುಗಡೆಯಾಗಿದೆ…
PRK ಸ್ಟುಡಿಯೋದಲ್ಲಿ ನಡೆದ ಬಿಡುಗಡೆ ಸಮಾರಂಭದಲ್ಲಿ ಹಲವರು ಭಾಗಿಯಾಗಿದ್ದರು… ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಈ ಕೃತಿಯನ್ನು ಬಿಡುಗಡೆ ಮಾಡಿದರು..
ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.
15 ಮಾರ್ಚ್ 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು.
ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಬಿಡುಗಡೆ ಮಾಡಲಾಗಿದೆ..
ಅಲ್ಲದೇ, ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.