Rashmika : ತಾಯಿಯಂತೆ ನೋಡಿಕೊಳ್ಳುತ್ತೇನೆ- ಸಮಂತ ಆರೋಗ್ಯದ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ..!!!
ಕಳೆದ ಕೆಲವು ದಿನಗಳಿಂದ ನಟಿ ಸಮಂತಾ ಮಯೋಸಿಟಿಸ್ ನಿಂದ ಬಳಲುತ್ತಿರುವುದು ಗೊತ್ತೇ ಇದೆ. ಸದ್ಯ ಸಮಂತಾ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಮಾನಿಗಳು, ಮತ್ತು ಅನೇಕ ಸೆಲೆಬ್ರಿಟಿಗಳು ಸಮಂತಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಸಹ ಸಮಂತಾ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ರಶ್ಮಿಕಾ ಮಂದಣ್ಣ ಸದ್ಯ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಸರಣಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ ನಟನೆಯ ತಮಿಳು ಚಿತ್ರ ವಾರಿಸು ಮತ್ತು ಹಿಂದಿ ಚಲನಚಿತ್ರ ಮಿಷನ್ ಮಜ್ನು ಬಿಡುಗಡೆ ಸಿದ್ದವಾಗಿವೆ. ರಶ್ಮಿಕಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ನಲ್ಲಿ ಮಿಷನ್ ಮಜ್ನು ಪ್ರಚಾರದ ಭಾಗವಾಗಿ ನೀಡಿದ ಸಂದರ್ಶನದಲ್ಲಿ ಸಮಂತಾ ಈ ಬಗ್ಗೆ ಮಾತನಾಡಿದ್ದಾರೆ.
“ಸಮಂತಾ ಮಯೋಸಿಟಿಸ್ನಿಂದ ಬಳಲುತ್ತಿದ್ದಾರೆ ಎಂದು ಅವರು ಘೋಷಿಸುವವರೆಗೂ ನನಗೆ ತಿಳಿದಿರಲಿಲ್ಲ. ಅವಳು ನನ್ನ ಬೆಸ್ಟ್ ಫ್ರೆಂಡ್. ಸಮಂತಾ ಅದ್ಭುತ ಮಹಿಳೆ. ಎಲ್ಲರನ್ನೂ ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ. ಮೈಯೋಸಿಟಿಸ್ ಬಗ್ಗೆ ನನಗೆ ಹೇಳಿರಲಿಲ್ಲ. ಸಮಂತಾ ತನ್ನ ಜೀವನದಲ್ಲಿ ಅನೇಕ ಸವಾಲುಗಳನ್ನು ಧೈರ್ಯದಿಂದ ಎದುರಿಸಿದ್ದಾಳೆ. ಅವರು ನನಗೆ ಸ್ಪೂರ್ತಿಯಾಗಿದ್ದಾರೆ. ಅವಳಿಗೆ ಎಲ್ಲಾ ರೀತಿಯಲ್ಲೂ ಶುಭವಾಗಲಿ ಎಂದು ಕೋರುತ್ತೇನೆ. ಈ ಸಮಯದಲ್ಲಿ ನಾನು ಅವಳೊಂದಿಗೆ ಇರಲು ಮತ್ತು ತಾಯಿಯಂತೆ ನೋಡುಕೊಳ್ಳಲು ಬಯಸುತ್ತೇನೆ. ಅವಳಿಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ರಶ್ಮಿಕಾ ಹೇಳಿದ್ದಾರೆ. ರಶ್ಮಿಕಾ ಮಾತಿನಿಂದಾಗಿ ಸಮಂತಾ ಅಭಿಮಾನಿಗಳು ಖುಷಿಯಾಗಿದ್ದಾರೆ.