Shivarajkumar : ಶಿವಣ್ಣ ಅಭಿನಯದ ಹೊಸ ಸಿನಿಮಾ ಘೋಷಣೆ
ಈಗಾಗಲೇ ಸಾಕಷ್ಟು ಪ್ರಾಜೆಕ್ಟ್ ಗಳಲ್ಲಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೀಗ ಮತ್ತೊಂದು ಹೊಸ ಸಿನಿಮಾ ಘೋಷಿಸುವ ಮೂಲಕ ಫ್ಯಾನ್ಸ್ ಗೆ ಖುಷಿ ಕೊಟ್ಟಿದ್ದಾರೆ..
ಈ ಹೊಸ ಚಿತ್ರಕ್ಕೆ ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ಬಂಡವಾಳ ಹೂಡುತ್ತಿದ್ದಾರೆ..
ತೇಜಸ್ವಿ ಕೆ ನಾಗ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಕಿರುತೆರೆ ಲೋಕದಲ್ಲಿ ತೇಜಸ್ವಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ.
ಸಿನಿಮಾ ಕುರಿತು ಮಾತನಾಡಿರುವ ತೇಜಸ್ವಿ ಶಿವಣ್ಣ ಈ ಚಿತ್ರದ ಕಥೆ ಕೇಳಿ ಅಭಿನಯಿಸಲು ಒಪ್ಪಿಗೆ ನೀಡಿದ್ದಾರೆ. ಶಿವರಾಜ್ ಕುಮಾರ್ ಅವರು ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದ ಶೀರ್ಷಿಕೆ ಹಾಗೂ ಉಳಿದ ವಿಷಯಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಶಿವರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಇಷ್ಟವಾಗುವಂತೆ ಕಥೆ ಬರೆದುಕೊಳ್ಳಲಾಗಿದೆ ಎಂದಿದ್ದಾರೆ.