Kantara : ಆಸ್ಕರ್ ರೇಸ್ ನಲ್ಲಿ ಕಾಂತಾರ – ಅಧಿಕೃತಗೊಳಿಸಿದ ಹೊಂಬಾಳೆ..!!
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು ಒಟಿಟಿಯಲ್ಲಿ ಅಬ್ಬರಕಿಸುತ್ತಾ ಇರುವ ಕಾಂತಾರ ಸಿನಿಮಾ ಇದೀಗ ಆಸ್ಕರ್ ರೇಸ್ ನಲ್ಲಿರುವ ವಿಚಾರವನ್ನ ಖುದ್ದು ಹೊಂಬಾಳೆ ಫಿಲಮ್ಸ್ ಸ್ಪಷ್ಟಪಡಿಸಿದೆ..
ಹೌದು..!
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ.
ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ಎರಡು ವಿಭಾಗದಲ್ಲಿ ಅದು ಅರ್ಹತೆ ಸುತ್ತನ್ನು ಪಾಸು ಮಾಡಿದ್ದು, ಮುಂದಿನ ಹಂತಕ್ಕೆ ಸಿನಿಮಾ ಹೋಗಬೇಕಾದರೆ, ಆಸ್ಕರ್ ಸದಸ್ಯರು ಮತ ಚಲಾಯಿಸುವುದು ಕಡ್ಡಾಯವಾಗಿದೆ. ವಿಶ್ವದಾದ್ಯಂತ ಒಟ್ಟು 301 ಸಿನಿಮಾಗಳು ಅರ್ಹತೆ ಸುತ್ತಿನಲ್ಲಿ ಪಾಸಾಗಿವೆ.
ಈ ಕುರಿತು ನಿರ್ದೇಶಕ ರಿಷಬ್ ಶೆಟ್ಟಿ ಟ್ವಿಟ್ ಮಾಡಿದ್ದು, ‘ಕಾಂತಾರ ಸಿನಿಮಾ ಆಸ್ಕರ್ ಅರ್ಹತೆಯ ಸುತ್ತಿನಲ್ಲಿ ಎರಡು ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ. ಈ ವಿಚಾರ ತಿಳಿಸಲು ಸಂತಸವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಅಲ್ಲದೇ, ಮುಂದಿನ ಹಂತಕ್ಕೆ ಹೋಗಿದ್ದು ಸಂಭ್ರಮ ತಂದಿದೆ’ ಎಂದು ಬರೆದುಕೊಂಡಿದ್ದಾರೆ..