Kranti : ನಟಿ ರಚಿತಾ ರಾಮ್ ವಿರುದ್ಧ ಕೇಸ್ ದಾಖಲು…!!!
ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಟಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ನಡೆದ ‘ಕ್ರಾಂತಿ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ರಚಿರಾ ರಾಮ್ “ಪ್ರತಿ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿ ಉತ್ಸವ ಮಾಡಿ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದರ ವಿಡಿಯೋ ವೈರಲ್ ಆಗಿದ್ದು ಸೋಶಿಯಲ್ ಮಿಡಿಯಾಗಳಲ್ಲಿ ಈ ಹೇಳಿಕೆಯನ್ನ ಖಂಡಿಸುತ್ತಿದ್ದಾರೆ.
ಇದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಸಂವಿಧಾನ ಜಾರಿಯಾದ ದಿನಕ್ಕೆ ಮಾಡಿದ ಅಪಮಾನ ಎಂದು ಸುದ್ದಿಗೋಷ್ಠಿಯಲ್ಲಿ ಶಿವಲಿಂಗಯ್ಯ ಆರೋಪಿಸಿದ್ದಾರೆ. ರಚಿತಾರಾಮ್ ಅವರ ಹೇಳಿಕೆ ದೇಶ ದ್ರೋಹ ಹೇಳಿಕೆಯಾಗಿದ್ದು, ಇವರ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ರಚಿತಾ ರಾಮ್ ವಿರುದ್ಧ ಮದ್ದೂರು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು…
Kranti , case filed against rachitha ram
rachitha ram , kranthi , darshan ,