ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಆಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಹೀಗಾಗಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ.
ಈಗಾಗಲೇ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಸೇರಿದಂತೆ ಹಲವು ಸ್ನೇಹಿತರು ದರ್ಶನ್ ರನ್ನು ಕಂಡು ಮಾತನಾಡಿಸಿದ್ದಾರೆ. ಆದರೆ, ಇಂದು ಮಗನನ್ನು ನೋಡಲು ತಾಯಿ ತೆರಳಿದ್ದು, ದರ್ಶನ್ ಕಣ್ಣೀರು ಸುರಿಸಿದ್ದಾರೆ.
ದರ್ಶನ್ ನೋಡಲು ತಾಯಿ ಮೀನಾ, ಪತ್ನಿ ಮತ್ತು ಮಗ ಸೋಮವಾರ ಜೈಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ತಾಯಿಯನ್ನು ನೋಡಿ ದರ್ಶನ್ ಕಣ್ಣೀರಿಟ್ಟಿದ್ದಾರೆ. ಬೆಳಿಗ್ಗೆಯೇ ದರ್ಶನ್ ತಾಯಿ ಮೀನಾ, ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಮಗನ ಸ್ಥಿತಿ ನೋಡುತ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್ ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟದ ಕುರತು ಕುಟುಂಬಸ್ಥರ ಜೊತೆ ದರ್ಶನ್ ಚರ್ಚಿಸಿದ್ದಾರೆ.
ಆದರೆ, ದರ್ಶನ್ ಕುಟುಂಬಸ್ಥರು ಭೇಟಿ ನೀಡಿರುವ ರೀತಿಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯರು ಜೈಲಿಗೆ ಎಂಟ್ರಿ ಕೊಡಬೇಕಾದರೆ ಹತ್ತಾರು ರೂಲ್ಸ್ ನ್ನು ಪೊಲೀಸರು ಮುಂದಿಡುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ ಎಂದು ಅನೇಕರು ದೂರಿದ್ದಾರೆ
ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಬೇಟಿ ಮಾಡಲು ಅವಕಾಶ ಇರುತ್ತದೆ. ಕಳೆದ ವಾರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಭೇಟಿ ಮಾಡಿದ್ದರು. ನಂತರ ನಟ ವಿನೋದ್ ಪ್ರಭಾಕರ್, ರಕ್ಷಿತಾ ಪ್ರೇಮ್ ದಂಪತಿ ಭೇಟಿ ಮಾಡಿದ್ದರು. ಈಗ ತಾಯಿ ಮತ್ತು ಸಹೋದರ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ರನ್ನು ಜೂನ್ 11ರಂದು ಬಂಧಿಸಲಾಗಿದೆ.