ಪುಟ್ ಪಾತ್ ಮಾರಾಟಗಾರರ ಪ್ರೀತಿಗೆ ಮಣಿದ ಅಮೂಲ್ಯ ಪತಿ ಜಗದೀಶ್ …
ನಟಿ ಅಮುಲ್ಯ ಅವಳಿ ಮಕ್ಕಳಿಗೆ ತಾಯಿಯಾಗಿರುವುದು ನಿಮಗೆಲ್ಲ ಗೊತ್ತೇ ಇದೆ ಬೆಂಗಳುರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಡೆಲೆವರಿ ಆಗಿತ್ತು. ಪತಿ ಜಗದೀಶ್ ಅಸ್ಪತ್ರೆಯಲ್ಲಿದ್ದು ಆರೈಕೆ ನೋಡಿಕೊಳ್ಳುತ್ತಿದ್ದಾರೆ. ಒಂದು ದಿನ ಆಸ್ಪತ್ರೆಯಿಂದ ಬಂದಾಗ ಅವರಿಗೆ ಆಶ್ಚರ್ಯ ಕಾದಿತ್ತು.
ರಸ್ತೆಯಲ್ಲಿ ಬಲೂನ್ ಮಾರುವ ವ್ಯಕ್ತಿಯೊಬ್ಬರು ಜಗದೀಶ್ ಅವರನ್ನ ಮಾತನಾಡಿ ಅಮ್ಯೂಲ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಜಗದೀಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸುಸಜ್ಜಿತ ಶಾಪ್ಗೂ ಫುಟ್ಫಾತ್ನಲ್ಲಿ ಮಾರುವ ಪುಟ್ಟ ಅಂಗಡಿಗೂ ಎಷ್ಟೊಂದು ವ್ಯತ್ಯಾಸವಿದೆ ಎಂದು ಮನಸ್ಸಿಗೆ ಅನ್ನಿಸಿತು. ಕೆಲವೊಮ್ಮೆ ದುಬಾರಿ ಬೆಲೆ ತೆತ್ತು ಕೊಂಡುಕೊಳ್ಳುವ ಶಾಪ್ನಲ್ಲಿ ಹೃದಯ ಶ್ರೀಮಂತಿಕೆಯೇ ಬಹಳ ಕಡಿಮೆ ಎಂದೆನಿಸಬಹುದು, ಆದರೆ ಕಡಿಮೆ ಬೆಲೆ ಕೊಟ್ಟು ಸಣ್ಣ ಅಂಗಡಿ ಅಥವಾ ಫುಟ್ಫಾತ್ನಲ್ಲಿ ಏನನ್ನಾದರೂ ತೆಗೆದುಕೊಂಡರೆ ಅವರಲ್ಲಿ ಹೆಚ್ಚಿನ ಪ್ರೀತಿ ವಿಶ್ವಾಸ ಗಮನಕ್ಕೆ ಬರುತ್ತದೆ.
ಶಿವರಾತ್ರಿಯ ದಿನದಂದು ಜಯನಗರದ ಆಸ್ಪತ್ರೆಯ ಬಲಭಾಗದ ಫುಟ್ಫಾತ್ನಲ್ಲಿ ಬಲೂನ್ ಮತ್ತು ಆಟಿಕೆಗಳನ್ನು ಮಾರುತ್ತಿದ್ದ ಕಾಲುಗಳಿಲ್ಲದ ವ್ಯಕ್ತಿ ರವಿ ಎನ್ನುವವರು ʼಅಮೂಲ್ಯ ಮೇಡಂಗೆ ಅವಳಿ ಮಕ್ಕಳಾಗಿದ್ದು ಕೇಳಿ ತುಂಬಾ ಸಂತೋಷವಾಯ್ತು ಸರ್, ಎಲ್ಲರೂ ಚೆನ್ನಾಗಿದಾರಲ್ವಾ ? ನೀವು ಯಾವಾಗ ಹೊರಗೆ ಬರುತ್ತೀರಾ ಎಂದು ಕಾಯುತ್ತಿದ್ದೆʼ ಎಂದು ಆತ್ಮೀಯವಾಗಿ ಮಾತನಾಡಿಸಿದ್ದನ್ನು ಕೇಳಿ ನನಗೆ ನಿಜಕ್ಕೂ ಆಶ್ಚರ್ಯ ಮತ್ತು ಸಂತೋಷ ಎರಡೂ ಆಯಿತು.
ಶ್ರೀಮಂತರಲ್ಲದಿದ್ದರೂ ಅವರ ಹೃದಯ ಶ್ರೀಮಂತಿಕೆ ಎಷ್ಟು ದೊಡ್ಡದಲ್ವಾ ? ಹೀಗಾಗಿ ಡಿಸ್ಚಾರ್ಜ್ ಆಗುವಾಗ ದಿನದಂದು ಕಾಲುಗಳಿಲ್ಲದಿದ್ದರೂ ಸ್ವಾಭಿಮಾನದಿಂದ ನಿತ್ಯ ತನ್ನ ಕೆಲಸ ಮಾಡಿಕೊಂಡು ಶ್ರಮವಹಿಸಿ ತನ್ನ ಜೀವನ ನಡೆಸುತ್ತಿರುವ ಆ ವ್ಯಕ್ತಿಯಿಂದ ಮಕ್ಕಳಿಗಾಗಿ ಮೊದಲ ಆಟಿಕೆಗಳ ರೂಪದಲ್ಲಿ ಎರಡು ಬಲೂನ್ ಅನ್ನು ಕೊಂಡೆವು.
ಎಲ್ಲವೂ ಕಮರ್ಷಿಯಲ್ ಮತ್ತು ದುಬಾರಿ ಆಗಿರುವ ಈಗಿನ ಕಾಲದಲ್ಲಿ ಈ ರೀತಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಹೃದಯವಂತರ ಬಳಿ ನಾವು ವಸ್ತುಗಳನ್ನು ಕೊಂಡುಕೊಳ್ಳುವುದರಲ್ಲಿ ಎಂದು ಇನ್ಸ್ಟಾಗ್ರಾಂ ಜಗದೀಶ್ ಬರೆದುಕೊಂಡಿದ್ದಾರೆ.