Rajanikanth : ರಜನಿ ಕಾಂತ್ ಪುತ್ರಿ ಐಶ್ವರ್ಯ ಮತ್ತೆ ಆಸ್ಪತ್ರೆಗೆ ದಾಖಲು
ತಮಿಳುನಾಡು : ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೊತೆಗೆ ಕೆಲ ದಿನಗಳ ಹಿಮದಷ್ಟೇ ಡಿವೋರ್ಸ್ ಪಡೆದುಕೊಂಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಆ ವೇಳೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು.. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು..
ಇದೀಗ ಮತ್ತೊಮ್ಮೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಅವರು ಜ್ವರ ಹಾಗೂ ತಲೆ ಸುತ್ತಿವಿಕೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಐಶ್ವರ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೇ ‘ಕೊರೊನಾ ಪೂರ್ವ ಮತ್ತು ಕೊರೊನಾ ನಂತರ’ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಜ್ವರ ಹಾಗೂ ತಲೆ ಸುತ್ತುವಿಕೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಅಂತಾ ತಿಳಿಸಿದ್ದಾರೆ. ಜೊತೆಗೆ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಐಶ್ವರ್ಯಾ, ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.
ಜನವರಿಯಲ್ಲಿ ಐಶ್ವರ್ಯಾ ಹಾಗೂ ಧನುಷ್ ಬೇರೆಯಾಗುತ್ತಿರುವುದಾಗಿ ಘೋಷಿಸಿದ್ದರು. ಪ್ರಸ್ತುತ ಐಶ್ವರ್ಯಾ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ.